ಸಾರಾಂಶ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗೆಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗೆಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.ಕಾರ್ಕಳ ಅಗ್ನಿ ಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಆಗಮಿಸಿ ಅಗ್ನಿ ಅವಘಡ ನಿರ್ವಹಣೆ ಬಗ್ಗೆ ತಿಳಿಸಿದರು.ಸಿಬ್ಬಂದಿ ರೂಪೇಶ್, ಗಣೇಶ್ ಹಾಗೂ ಸುರೇಶ್ ಸಿಲಿಂಡರ್ ಸ್ಫೋಟ ಅಥವಾ ಇನ್ನಿತರ ಬೆಂಕಿ ಅವಘಡದ ಸಂದರ್ಭದಲ್ಲಿ ಯಾವ ರೀತಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂಬುದರ ಬಗ್ಗೆ ತಮ್ಮ ಅನುಭವದ ಮೂಲಕ ತಿಳಿಸಿದರು.ನಂತರ ಶಿಬಿರಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಸಂಕ್ಷಿಪ್ತವಾಗಿ ಅಗ್ನಿ ಅವಘಡದ ನಿರ್ವಹಣೆಯ ಬಗ್ಗೆ ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಹೇಮಲತಾ ಶೆಟ್ಟಿ ಸ್ವಾಗತಿಸಿದರು. ಸಹ ಶಿಬಿರಾಧಿಕಾರಿಯಾದ ಪ್ರಿಯಾಂಕ ವಂದಿಸಿದರು. ರಾಷ್ಟ್ರೀಯ ಸೇವಾಯೋಜನಾ ಘಟಕದ ನಾಯಕಿ ಅನಿಶಾ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾರ್ಥಿಗಳು, ಅಗ್ನಿಶಾಮಕ ಠಾಣೆಯ ಇತರ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.