ಸಾರಾಂಶ
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಡೋರ್ ತೆಗೆದು ಹೊರಗೆ ಬಂದು ನೋಡನೋಡುತ್ತಿದ್ದಂತೆ ಕಾರು ಧಗ ಧಗನೆ ಹೊತ್ತಿ ಉರಿದು, ಕರಕಲಾದ ಘಟನೆ ತಾಲೂಕಿನ ಹೆರಗು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣ, ಪುಟ್ಟ ಗಾಯವಾಗಿದೆ. ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ನಂದಿಸಲು ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಕಾರು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿತ್ತು.
ಹಾಸನ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರನೇ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಕೂಡಲೇ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಡೋರ್ ತೆಗೆದು ಹೊರಗೆ ಬಂದು ನೋಡನೋಡುತ್ತಿದ್ದಂತೆ ಕಾರು ಧಗ ಧಗನೆ ಹೊತ್ತಿ ಉರಿದು, ಕರಕಲಾದ ಘಟನೆ ತಾಲೂಕಿನ ಹೆರಗು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಸಣ್ಣ, ಪುಟ್ಟ ಗಾಯವಾಗಿದೆ.
ಆನಳ್ಳಿ ಗ್ರಾಮದ ಅಶೋಕ್ ಎಂಬುವವರಿಗೆ ಸೇರಿದ ಓಮ್ನಿ ಕಾರು ಇದಾಗಿದ್ದು, ಅಶೋಕ್ ಅವರು ತಮ್ಮ ಇಟ್ಟಿಗೆ ಫ್ಯಾಕ್ಟರಿಗೆ ಹೋಗಿ ವಾಪಾಸ್ಸಾಗುತ್ತಿದ್ದರು. ಆಗ ಹೆರಗು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಶೋಕ್ ಹಾಗೂ ಇಬ್ಬರು ಸ್ನೇಹಿತರು ತಕ್ಷಣ ಗಾಬರಿಗೊಂಡು ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಓಮ್ನಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ನಂದಿಸಲು ಪೆಟ್ರೋಲ್ ಬಂಕ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪ್ರಯತ್ನಿಸಿದರಾದರೂ ಕಾರು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲಾಗಿತ್ತು.ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.