ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದ ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಘಟನೆಯಿಂದ ಬಾಧಿತರಾದ ಕುಟುಂಬಗಳನ್ನು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದ ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಘಟನೆಯಿಂದ ಬಾಧಿತರಾದ ಕುಟುಂಬಗಳನ್ನು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಿದರು. ಅಗ್ನಿ ಅವಘಡದಿಂದ ಕುಟುಂಬಗಳು ಎದುರಿಸುತ್ತಿರುವ ಸಂಕಷ್ಟ ಹಾಗೂ ನಷ್ಟದ ಕುರಿತು ಜಿಲ್ಲಾಧಿಕಾರಿ ಮಾಹಿತಿ ಪಡೆದುಕೊಂಡರು. ಬಾಧಿತ ಕುಟುಂಬಗಳಿಗೆ ಅಗತ್ಯವಿರುವ ಕುಡಿಯುವ ನೀರು, ಊಟ, ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇನ ನೀಡಿದರು.ಅಗ್ನಿ ಅವಘಡದಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರ ಲಭ್ಯವಿರುವ ಪರಿಹಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.ಬಾಧಿತ ಕುಟುಂಬಗಳ ಸಮಸ್ಯೆಗಳಿಗೆ ಸ್ಪಂದಿಸಿ, ಯಾವುದೇ ವಿಳಂಬವಿಲ್ಲದೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.ಬೇಟಿ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಹುನಗುಂದ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಸೇರಿದಂತೆ ಹುನಗುಂದ ಸಿಪಿಐ, ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಇತರರು ಉಪಸ್ಥಿತರಿದ್ದರು.