ದುಷ್ಕರ್ಮಿಗಳಿಂದ ಬೆಂಕಿ; ನೂರಾರು ಎಕರೆ ಅರಣ್ಯ ನಾಶ

| Published : Mar 05 2025, 12:36 AM IST

ದುಷ್ಕರ್ಮಿಗಳಿಂದ ಬೆಂಕಿ; ನೂರಾರು ಎಕರೆ ಅರಣ್ಯ ನಾಶ
Share this Article
  • FB
  • TW
  • Linkdin
  • Email

ಸಾರಾಂಶ

ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ನಾಶವಾಗಿರುವ ಘಟನೆ ತಾಲೂಕಿನ ಶಿವನಸಮುದ್ರ ಬಳಿಯ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ‌ ಗುಡ್ಡೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಈ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಮರಗಿಡಗಳು, ಬಹು ಉಪಯೋಗಿ ಸಸ್ಯ ಸಂಕುಲ‌ ಬೆಂಕಿಗೆ ಆಹುತಿಯಾಗಿವೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ನಾಶವಾಗಿರುವ ಘಟನೆ ತಾಲೂಕಿನ ಶಿವನಸಮುದ್ರ ಬಳಿಯ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ‌ ಗುಡ್ಡೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಈ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಮರಗಿಡಗಳು, ಬಹು ಉಪಯೋಗಿ ಸಸ್ಯ ಸಂಕುಲ‌ ಬೆಂಕಿಗೆ ಆಹುತಿಯಾಗಿವೆ. ಜೊತೆಗೆ ಈ ಪ್ರದೇಶದಲ್ಲಿ ಬೀಡು ಬಿಟ್ಟಿದ್ದ ಪ್ರಾಣಿ- ಪಕ್ಷಿಗಳು ಸಹ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆಹುತಿಯಾಗಿವೆ. ಹೊಗೆ ಮಿಶ್ರಿತ ಬೆಂಕಿ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ಇನ್ನು ಕೆಲವೇ ಹೊತ್ತಿನಲ್ಲಿ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡುವ ಆತಂಕ ಎದುರಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಜೊತೆ ಧಾವಿಸಿದ ಉಪ‌ ವಲಯ ಅರಣ್ಯಾಧಿಕಾರಿ ಶಿವರಾಜು ಅವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಯಾರೋ ಕಿಡಿಗೇಡಿಗಳ ಕೃತ್ಯ ಎಂದಿರುವ ಅವರು ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಇನ್ನು ಕೆಲವೇ ಹೊತ್ತಿನಲ್ಲಿ ಬೆಂಕಿಯನ್ನು ಸಂಪೂರ್ಣ ನಂದಿಸುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.