ಅಗ್ನಿ ಅವಘಡಗಳ ಬಗ್ಗೆ ಅಗ್ನಿಶಾಮಕ ಠಾಣಾಧಿಕಾರಿಗಳಿಂದ ಅಣಕು ಪ್ರದರ್ಶನ

| Published : Apr 20 2025, 01:46 AM IST

ಅಗ್ನಿ ಅವಘಡಗಳ ಬಗ್ಗೆ ಅಗ್ನಿಶಾಮಕ ಠಾಣಾಧಿಕಾರಿಗಳಿಂದ ಅಣಕು ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಏ.14 ರಿಂದ 20 ರವರೆಗೆ ‘ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷ ವಾಕ್ಯದೊಂದಿಗೆ ಸಪ್ತಾಹ ಆಚರಿಸಲಾಗುತ್ತಿದೆ ಅಮೂಲ್ಯ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸ್ಥಳೀಯ ಅಗ್ನಿಶಾಮಕ ಠಾಣಾಧಿಕಾರಿಗಳಿಂದ ಅರಿವು ಹಾಗೂ ಅಣುಕು ಪ್ರದರ್ಶನ ನಡೆಯಿತು.

ಆಸ್ಪತ್ರೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಅವಗಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಗ್ನಿ ಶಾಮಕ ಠಾಣಾಧಿಕಾರಿ ಅಂಬರೀಶ್ ಎನ್.ಉಪಾರ ಮಾಹಿತಿ ನೀಡಿದರು.

ಏ.14 ರಿಂದ 20 ರವರೆಗೆ ‘ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷ ವಾಕ್ಯದೊಂದಿಗೆ ಸಪ್ತಾಹ ಆಚರಿಸಲಾಗುತ್ತಿದೆ ಅಮೂಲ್ಯ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ ಎಂದರು.

ನಂತರ ಅಗ್ನಿ ಅವಘಡಗಳಲ್ಲಿ ಅಗ್ನಿ ಶಾಮಕ ಇಲಾಖೆಯಿಂದ ಕೈಗೊಳ್ಳುವ ಕ್ರಮಗಳು ಹಾಗೂ ಇಲಾಖೆ ಬಳಸುವ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು. ಸಿಬ್ಬಂದಿ ಅಣುಕು ಪ್ರದರ್ಶನ ಮೂಲಕ ಹಾಗೂ ಕರಪತ್ರ ವಿತರಿಸುವ ಮೂಲಕ ವೈದ್ಯರಿಗೆ ಹಾಗೂ ಅಧಿಕಾರಿ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಮಾತನಾಡಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಅಧಿಕಾರಿಗಳು ಆಕಸ್ಮಿಕ ಬೆಂಕಿ ಸಂಭವಿಸಿದ ಕಡೆ ಹಾಗೂ ತುರ್ತು ಸಂದರ್ಭಗಳಲ್ಲಿ ತಕ್ಷಣ ಧಾವಿಸಿ ತಮ್ಮ ಜೀವದ ಹಂಗು ತೊರೆದು ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿ ಕೊಳ್ಳುತ್ತಿರುವದು ಶ್ಲಾಘನೀಯ ಎಂದರು.

ಈ ವೇಳೆ ಆಸ್ಪತ್ರೆ ತಜ್ಞ ವೈದ್ಯರು, ಅಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವೆಂಕಟೇಶ್ ಟಿ, ಉದಯಕುಮಾರ, ನೂರಸಾಬ್ ಮಕ್ತುಮನವರ, ರಮೇಶ್ ಬಡಿಗೇರ ಹಾಗೂ ಆಸ್ಪತ್ರೆಯ ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.