ಪಟಾಕಿ ಸಿಡಿಸಿ, ಬಣ್ಣ ಎರಚಿ ಕಾರ್ಯಕರ್ತರ ಸಂಭ್ರಮ

| Published : Jun 05 2024, 12:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕೋಡಿ ಪಟ್ಟಣ ಸೇರಿದಂತೆ ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕೋಡಿ ಪಟ್ಟಣ ಸೇರಿದಂತೆ ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಅವಧಿಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ವಿರುದ್ದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಸುಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸುಮಾರು 90834 ಮತಗಳಿಂದ ಜಯ ಸಾಧಿಸಿದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಗುಲಾಲ ಎರಚಿ ಸಂಭ್ರಮಾಚರಣೆ ಮಾಡಿದರು. ಕಾರ್ಯಕರ್ತರು ಪಟ್ಟಣದಲ್ಲಿನ ಮತ ಏಣಿಕೆ ಕೇಂದ್ರದ ಆರ್.ಡಿ.ಕಾಲೇಜಿನ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಗುಲಾಲು ಎರಚುವ ಮೂಲಕ ಶುಭ ಕೋರಿ ಅಲ್ಲಿಂದ ಘೋಷಣೆ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು.

ಮೆರವಣಿಗೆಗೆ ಮಳೆ ಅಡ್ಡಿ: ಚುನಾವಣೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಚಿಕ್ಕೋಡಿ ಪಟ್ಟಣ ಹಾಗೂ ತಾಲೂಕಾದ್ಯಂತ ಮಿಂಚು, ಗುಡುಗು ಸಹಿತ ಸುಮಾರು ಎರಡು ಗಂಟೆಗಳ ಧಾರಕಾರವಾಗಿ ಸುರಿದ ಮಳೆಯಿಂದ ಜನ ತಮ್ಮತಮ್ಮ ಮನೆ ಸೇರಿಕೊಂಡರು. ಹೀಗಾಗಿ ವಿಜಯೋತ್ಸವ ಆಚರಿಸಲು ಸಾಧ್ಯವಾಗಲಿಲ್ಲ.