ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿ ಶಾಮಕದಳ

| Published : Aug 19 2025, 01:00 AM IST

ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿ ಶಾಮಕದಳ
Share this Article
  • FB
  • TW
  • Linkdin
  • Email

ಸಾರಾಂಶ

ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಪಟ್ಟಣದ ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಉತ್ತರ ಪ್ರದೇಶ ಮೂಲಕ ಲಕ್ಷ್ಮಣ ಎಂಬ 35 ವರ್ಷದ ವ್ಯಕ್ತಿ ನದಿ ಪ್ರವಾಹದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪಟ್ಟಣದ ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಉತ್ತರ ಪ್ರದೇಶ ಮೂಲಕ ಲಕ್ಷ್ಮಣ ಎಂಬ 35 ವರ್ಷದ ವ್ಯಕ್ತಿ ನದಿ ಪ್ರವಾಹದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಪಟ್ಟಣದ ರಾಂಪುರ ರಸ್ತೆಯ ಟಿಎಪಿಎಂಸಿ ಬಳಿಯ ಡೆಲ್ಲಿಗೆಟ್ ಬಳಿ ಇರುವ ಕಾವೇರಿ ನದಿ ಬಳಿ ವ್ಯಕ್ತಿ ಸಿಲುಕಿರುವ ಬಗ್ಗೆ ಸ್ಥಳೀಯ ಜನರಿಂದ ಮಾಹಿತಿ ಪಡೆದ ಪಟ್ಟಣದ ಅಗ್ನಿಶಾಮಕ ಠಾಣಾಧಿಕಾರಿ ಅಂಬರೀಷ್ ಎನ್.ಉಪ್ಪಾರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಈತ ಉತ್ತರ ಪ್ರದೇಶದವನಾಗಿದ್ದು, ಉದ್ಯೋಗ ಅರಸಿ ಮಹಾರಾಷ್ಟ್ರ ನಂತರ ಕರ್ನಾಟಕಕ್ಕೆ ಬಂದಿದ್ದಾನೆ. ಕೆಆರ್‌ಎಸ್ ಅಣೆಕಟ್ಟೆಯಿಂದ 80 ಸಾವಿರಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಪಟ್ಟಣದ ಡೆಲ್ಲಿಗೆಟ್ ಬಳಿ ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದು ರಕ್ಷಣೆ ಮಾಡಲಾಗಿದೆ.

ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ 80 ಸಾವಿರಕ್ಕು ಹೆಚ್ಚಿನ ಕ್ಯುಸೆಕ್ ನೀರನ್ನು ಬಿಟ್ಟಿದ್ದರಿಂದ ಏಕಾಏಕಿ ನೀರು ದೊಡ್ಡ ಪ್ರಮಾಣದಲ್ಲಿ ಹರಿದು ಬಂದಿದ್ದರಿಂದ ನದಿ ಮಧ್ಯೆ ಕುಳಿತ್ತಿದ್ದ ಲಕ್ಷ್ಮಣ ಎಂಬ ವ್ಯಕ್ತಿ ಪ್ರವಾಹಕ್ಕೆ ಸಿಲುಕಿದ್ದಾನೆ. ಈ ವೇಳೆ ಸ್ಥಳೀಯರು ವ್ಯಕ್ತಿ ಸಿಲುಕಿರುವ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಠಾಣಾಧಿಕಾರಿಗಳು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಪರಮೇಶ್, ಕೆ.ಪಿ.ಚಂದ್ರಶೇಖರ್ , ತೇಜಮೂರ್ತಿ, ನೂರ್ ಸಾಬ್, ವಿಶ್ವಾಸ್ ಭಾಗವಹಿಸಿದ್ದರು.

ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಶ್ರೀರಂಗಪಟ್ಟಣ: ತಾಲೂಕಿನ ಬೊಮ್ಮುರು ಅಗ್ರಹಾರ ಗ್ರಾಮದ ಪಶ್ಚಿಮವಾಹಿನಿ ಕಾವೇರಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಗೆ ಸುಮಾರು 45 ರಿಂದ 50 ವರ್ಷವಾಗಿದೆ. 5.6 ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ನೀಲಿ ಬಣ್ಣದ ಅಂಡರ್ ವೇರ್, ನೀಲಿ ಬಣ್ಣದ ಟ್ರ್ಯಾಕ್ ಪ್ಯಾಟ್, ಬಲಗೈನಲ್ಲಿ ಕೆಂಪು ಮಣಿಗಳಿಂದ ಕೂಡಿರುವ ದಾರ ಹಾಗೂ ಬಲ ಗಾಲಿನಲ್ಲಿ ಕಪ್ಪು ಬಿಳಿದಾವಿದೆ. ಶ್ರೀರಂಗಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.