ಪ್ರಥಮ ಚಿಕಿತ್ಸೆಯ ಜಾಗೃತಿ ನಮ್ಮೆಲ್ಲರ ಕರ್ತವ್ಯ: ಡಾ. ಸೋನಿ

| Published : Aug 29 2025, 01:00 AM IST

ಪ್ರಥಮ ಚಿಕಿತ್ಸೆಯ ಜಾಗೃತಿ ನಮ್ಮೆಲ್ಲರ ಕರ್ತವ್ಯ: ಡಾ. ಸೋನಿ
Share this Article
  • FB
  • TW
  • Linkdin
  • Email

ಸಾರಾಂಶ

ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಜಿನೇವಾ ಒಪ್ಪಂದದ ಜಾಗೃತಿ ಮತ್ತು ಪ್ರಥಮ ಚಿಕಿತ್ಸಾ ತರಬೇತಿ’ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿ ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರದ ಮುಖ್ಯಸ್ಥ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಜಿನೇವಾ ಒಪ್ಪಂದದ ಜಾಗೃತಿ ಮತ್ತು ಪ್ರಥಮ ಚಿಕಿತ್ಸಾ ತರಬೇತಿ’ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿ ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರದ ಮುಖ್ಯಸ್ಥ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಇಶಾನಿ ಮೆಡಿಕಲ್ ಸೆಂಟರ್ ಇದರ ವೈದ್ಯಾಧಿಕಾರಿ ಡಾ. ಸೋನಿ ಅವರು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ವಿದ್ಯಾರ್ಥಿಗಳಿಗೆ ನೀಡಿ, ಪ್ರಥಮ ಚಿಕಿತ್ಸೆ ಬಗೆಗಿನ ಮಾಹಿತಿ ಪಡೆಯುವುದು ನಮ್ಮೆಲ್ಲರ ಕರ್ತವ್ಯ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೇಗೆ ಪ್ರಥಮ ಚಿಕಿತ್ಸೆಯನ್ನು ನೀಡಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟ ಉಪಯುಕ್ತ ಮಾಹಿತಿಯನ್ನ ಹಂಚಿಕೊಂಡರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕುಂದಾಪುರ ರೆಡ್ ಕ್ರಾಸ್ ಘಟಕ ಖಜಾಂಜಿ ಶಿವರಾಮ್ ಶೆಟ್ಟಿ, ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾಗಿರುವ ಉಪ ಪ್ರಾಂಶುಪಾಲ ಜಯಶೀಲ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಂಚನ ನಿರೂಪಿಸಿದರು.