ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿರುವ ಜಿ.ಎಂ. ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವನ್ನು ಜ.11ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಜಿಎಂ ವಿವಿ ಆವರಣದಲ್ಲಿರುವ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
- ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲ್ ಸ್ವಾಮಿ ಭಾಗಿ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿರುವ ಜಿ.ಎಂ. ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವನ್ನು ಜ.11ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಜಿಎಂ ವಿವಿ ಆವರಣದಲ್ಲಿರುವ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಎಂ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿಸಿದರು.ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಉಪಗ್ರಹ ಕೇಂದ್ರದ ಮಾಜಿ ನಿರ್ದೇಶಕ ಡಾ.ಮೈಲ್‌ಸ್ವಾಮಿ ಅಣ್ಣಾದೊರೈ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ ಡಾ. ಜಿ.ಎಂ.ಸಿದ್ದೇಶ್ವರ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಲಿದ್ದಾರೆ ಮತ್ತು ಪದವೀಧರರಿಗೆ ಶುಭ ಹಾರೈಸಲಿದ್ದಾರೆ. ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ದಾವಣಗೆರೆ ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಜಿಎಂ ವಿಶ್ವವಿದ್ಯಾಲಯದ ಅಧೀನದಲ್ಲಿನ ಮೂರು ಸ್ನಾತಕೋತ್ತರ ವಿಭಾಗಗಳ ಒಟ್ಟು 318 ವಿದ್ಯಾರ್ಥಿಗಳಿಗೆ ಈ ಸಂದರ್ಭ ಪದವಿಗಳನ್ನು ಪ್ರದಾನ ಮಾಡಲಾಗುವುದು. ಇದರಲ್ಲಿ ಎಂಬಿಎ ವಿಭಾಗದ 263 ವಿದ್ಯಾರ್ಥಿಗಳು, ಎಂಸಿಎ ವಿಭಾಗದ 44 ವಿದ್ಯಾರ್ಥಿಗಳು ಹಾಗೂ ಎಂಕಾಂ ವಿಭಾಗದ 11 ವಿದ್ಯಾರ್ಥಿಗಳು ಸೇರಿದ್ದಾರೆ. ಈ ಪದವಿ ಪ್ರದಾನವು ವರ್ಷಗಳ ಪರಿಶ್ರಮದ ಪರಾಕಾಷ್ಠೆಯಾಗಿದ್ದು, ಅವರ ವೃತ್ತಿಪರ ಹಾಗೂ ಶೈಕ್ಷಣಿಕ ಜೀವನದ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ ಎಂದು ಹೇಳಿದರು.ಸಮಾರಂಭದಲ್ಲಿ ಕುಲಪತಿ ಡಾ. ಎಸ್.ಆರ್. ಶಂಕಪಾಲ್, ಸಹ ಕುಲಪತಿ ಡಾ. ಎಚ್.ಡಿ.ಮಹೇಶಪ್ಪ, ಕುಲಸಚಿವ ಡಾ. ಬಿ.ಎಸ್. ಸುನೀಲ್ ಕುಮಾರ್, ಮೌಲ್ಯಮಾಪನ ಉಪ ಕುಲಸಚಿವರು, ಡೀನ್‌ಗಳು, ನಿರ್ದೇಶಕರು ಹಾಗೂ ಹಿರಿಯ ಅಧ್ಯಾಪಕರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದಲ್ಲದೇ, ನಿರ್ವಹಣಾ ಮಂಡಳಿ, ಆಡಳಿತ ಮಂಡಳಿ, ಶೈಕ್ಷಣಿಕ ಮಂಡಳಿ, ಹಣಕಾಸು ಸಮಿತಿ ಹಾಗೂ ಸಂಶೋಧನೆ ಮತ್ತು ನಾವೀನ್ಯತೆ ಮಂಡಳಿ ಸೇರಿದಂತೆ ವಿಶ್ವವಿದ್ಯಾಲಯದ ಶಾಸನಬದ್ಧ ಮತ್ತು ಆಡಳಿತಾತ್ಮಕ ಮಂಡಳಿಗಳ ಸದಸ್ಯರು ಭಾಗವಹಿಸಲಿದ್ದಾರೆ. ನಿರ್ವಹಣಾ ಮಂಡಳಿ *(BOM),* ಆಡಳಿತ ಮಂಡಳಿ *(BOG),* ಶೈಕ್ಷಣಿಕ ಮಂಡಳಿ *(AC),* ಹಣಕಾಸು ಸಮಿತಿ *(FC)* ಹಾಗೂ ಸಂಶೋಧನೆ ಮತ್ತು ನಾವೀನ್ಯತೆ ಮಂಡಳಿ *(RIC)* ಸೇರಿದಂತೆ ವಿಶ್ವವಿದ್ಯಾಲಯದ ಶಾಸನಬದ್ಧ ಮತ್ತು ಆಡಳಿತಾತ್ಮಕ ಮಂಡಳಿಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರ ಉಪಸ್ಥಿತಿಯು ವಿಶ್ವವಿದ್ಯಾಲಯದ ಶೈಕ್ಷಣಿಕ, ಆಡಳಿತಾತ್ಮಕ, ಹಣಕಾಸು ಮತ್ತು ಸಂಶೋಧನಾ ಚಟುವಟಿಕೆಗಳಿಗೆ ದಿಕ್ಕು ನೀಡುವ ಸಮೂಹ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು.ಪ್ರದಾನಗೊಳ್ಳುವ ಪದವಿಗಳು ವ್ಯಾಪಾರ ಆಡಳಿತ *(ಎಂಬಿಎ)*, ಕಂಪ್ಯೂಟರ್ ಅಪ್ಲಿಕೇಶನ್ *(ಎಂಸಿಎ)* ಮತ್ತು ವಾಣಿಜ್ಯ *(ಎಂಕಾಂ)* ಈ ಕ್ಷೇತ್ರಗಳಲ್ಲಿ ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಸಿದ್ಧರಾಗಿರುವ ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು ಮತ್ತು ಸಾಧನೆಗಳನ್ನು ಗೌರವಿಸುತ್ತವೆ ಎಂದು ವಿವರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜಿಎಂ ವಿವಿ ಸಹ ಕುಲಪತಿ ಡಾ. ಎಚ್.ಡಿ. ಮಹೇಶಪ್ಪ, ಕುಲಸಚಿವ ಡಾ. ಬಿ.ಎಸ್. ಸುನೀಲ್ ಕುಮಾರ, ಉಪ ಕುಲಪತಿ ಡಾ. ಬಿ.ಎನ್. ವೀರಭದ್ರ ಸ್ವಾಮಿ, ಮಾರ್ಕೆಟಿಂಗ್ ಮತ್ತು ಪ್ರಮೋಷನ್ ವಿಭಾಗದ ಡೀನ್ ಡಾ. ಟಿ.ಎಂ. ವೀರಗಂಗಾಧರ ಸ್ವಾಮಿ ಇತರರು ಇದ್ದರು.- - -
(ಕೋಟ್) ವಿಶ್ವವಿದ್ಯಾಲಯದ ನಾಯಕತ್ವವು ಗುಣಮಟ್ಟದ ಶಿಕ್ಷಣ, ಸಂಶೋಧನೆ ಆಧಾರಿತ ಕಲಿಕೆ ಮತ್ತು ಸಮಾಜದ ಬದಲಾಗುತ್ತಿರುವ ಅಗತ್ಯಗಳಿಗೆ ಸ್ಪಂದಿಸುವ ನಾವೀನ್ಯತೆಗಳ ಮೇಲೆ ಜಿಎಂ ವಿಶ್ವವಿದ್ಯಾಲಯವು ವಿಶೇಷ ಗಮನಹರಿಸುತ್ತದೆ.- ಡಾ. ಎಸ್.ಆರ್. ಶಂಕಪಾಲ್, ಕುಲಪತಿ.
- - --9ಕೆಡಿವಿಜಿ32:
ದಾವಣಗೆರೆಯ ಜಿ.ಎಂ. ವಿವಿಯಲ್ಲಿ ಪ್ರಥಮ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಕುರಿತು ವಿವಿ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.