ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಸುಗಮ

| Published : Mar 26 2024, 01:18 AM IST

ಸಾರಾಂಶ

ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೧೯೭೪೩ ವಿದ್ಯಾರ್ಥಿಗಳ ಪೈಕಿ ೧೯೫೭೨ ಮಂದಿ ಹಾಜರಾಗಿದ್ದು, ೧೭೧ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಲಾರ

ಜಿಲ್ಲೆಯ ೬೫ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ೧೭೧ ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು.

ನಗರದ ಚಿನ್ಮಯ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಹೂ ನೀಡಿ ಸ್ವಾಗತಿಸಿ, ಶುಭ ಕೋರಿದ ಅವರು, ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ಒದಗಿಸಿದರು.

ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೧೯೭೪೩ ವಿದ್ಯಾರ್ಥಿಗಳ ಪೈಕಿ ೧೯೫೭೨ ಮಂದಿ ಹಾಜರಾಗಿದ್ದು, ೧೭೧ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆಯಿತು.

ಮೊದಲ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕರಿಸಿದ್ದಾರೆ. ಬೆಳಗ್ಗೆ ೯-೫೦ರಿಂದಲೇ ಪ್ರವೇಶ

ಮಕ್ಕಳಿಗೆ ಹೂ ನೀಡುವ ಮೂಲಕ ಬೆಳಗ್ಗೆ ೯-೫೦ಕ್ಕೆ ಪ್ರವೇಶ ನೀಡಲು ಆರಂಭಿಸಲಾಯಿತು. ಮೊದಲ ದಿನದ ಪರೀಕ್ಷೆ ಬರೆಯುವ ಆತಂಕ ಮತ್ತು ಇಲಾಖೆ ಇದೇ ಮೊದಲ ಬಾರಿಗೆ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಭಯದಿಂದಲೇ ಕೇಂದ್ರದತ್ತ ಬಂದಿದ್ದು ಕಂಡು ಬಂತು.

ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳ ತಂಡ ಸೇರಿದಂತೆ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರಿಗಳಾದ ಸಗೀರಾ ಅಂಜುಂ,ಭಾಗ್ಯವತಮ್ಮ, ಡಿವೈಪಿಸಿಗಳಾದ ಚಂದ್ರಕಲಾ, ಗುರುಮೂರ್ತಿ, ಬಿಇಒಗಲಾದ ಕನ್ನಯ್ಯ, ಗಂಗರಾಮಯ್ಯ, ಮುನಿವೆಂಕಟರಾಮಾಚಾರಿ, ಚಂದ್ರಕಲಾ, ಸುಕನ್ಯಾ, ಮುನಿಲಕ್ಷ್ಮಯ್ಯ,ಎವೈಪಿಸಿ ಮೋಹನ್‌ಬಾಬು, ವಿಷಯ ಪರೀಕ್ಷಕರಾದ ಶಶಿವಧನ, ಗಾಯತ್ರಿ, ಶಂಕರೇಗೌಡ, ವೆಂಕಟೇಶಬಾಬು ಮತ್ತಿತರರೂ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.