ವಾಲಿಬಾಲ್, ತ್ರೋಬಾಲ್‌ನಲ್ಲಿ ಪ್ರಥಮ: ತಾಲೂಕು ಮಟ್ಟಕ್ಕೆ ಆಯ್ಕೆ

| Published : Aug 25 2024, 01:46 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಾದಾಮಿತಾಲೂಕಿನ ಚೋಳಚಗುಡ್ಡದ ಜಿ.ವಿ.ಹಿರೇಮಠ ಪ್ರೌಢಶಾಲೆಯಲ್ಲಿ ನಡೆದ ಬೇಲೂರು ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಶ್ರೀ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ತ್ರೋಬಾಲ್ ಹಾಗೂ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬಾದಾಮಿ

ತಾಲೂಕಿನ ಚೋಳಚಗುಡ್ಡದ ಜಿ.ವಿ.ಹಿರೇಮಠ ಪ್ರೌಢಶಾಲೆಯಲ್ಲಿ ನಡೆದ ಬೇಲೂರು ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಶ್ರೀ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ತ್ರೋಬಾಲ್ ಹಾಗೂ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ಮತ್ತು ಬಾಲಕಿಯರ ಖೋಖೋ ಪ್ರಥಮ, ಬಾಲಕರ ಥ್ರೋ ಬಾಲ್‌ನಲ್ಲಿ ದ್ವಿತೀಯ, 100 ಮೀಟರ್ ಓಟದಲ್ಲಿ ಯಶವಂತ ಗಾರವಾಡ ಪ್ರಥಮ, ಹಾಲಪ್ಪ ಲಮಾಣಿ ದ್ವಿತೀಯ, ಬಾಲಕಿಯರ 100 ಮೀಟರ್ ಓಟದಲ್ಲಿ ಸುಮಾ ಮೂಲಿಮನಿ ಪ್ರಥಮ, ಸಹನಾ ಚೌಡಿ ವಿದ್ಯಾರ್ಥಿನಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಭಿನಂದನೆ: ಈ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಪ್ರದರ್ಶನ ನೀಡಲು ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ಸಿ.ಎಸ್.ಬದಾಮಿ ಅವರಿಗೆ, ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.