ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಥಮ ಸಭೆ

| Published : Dec 14 2024, 12:50 AM IST

ಸಾರಾಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಯಲ್ಲಿ ನೀಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆ ಡಿ.12ರಂದು ಬೆಳಗ್ಗೆ 10.30 ಗಂಟೆಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ಈ ಸಭೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಐದು ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಯಲ್ಲಿ ನೀಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಜರಿದ್ದರು. ಗ್ಯಾರಂಟಿ ಯೋಜನೆಗಳ ಇಲಾಖೆಯ ಅಧಿಕಾರಿಗಳೊಂದಿಗೆ ಐದು ಯೋಜನೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಯೋಜನೆಗಳ ಕುರಿತು ವಿಸ್ತಾರವಾಗಿ ಮಾಹಿತಿ ಪಡೆದು ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಚರ್ಚಿಸಿದರು.