ಪಿಎಂಶ್ರೀ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮೈಸೂರು ವಿಭಾಗ ತಂಡದ ಪರ ಆಟವಾಡಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ.

ಕನ್ನಡಪ್ರಭ ವಾರ್ತೆ ಮಡಿಕೇರಿಹಾಸನದಲ್ಲಿ ನ.21 ರಿಂದ 23 ರವರೆಗೆ ನಡೆದ 14 ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮಡಿಕೇರಿಯ ವಿದ್ಯಾರ್ಥಿಗಳು ಮೈಸೂರು ವಿಭಾಗದ ತಂಡದ ಪರ ಆಟವಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ತಸ್ವಿಕ ತಂಗಮ್ಮ.ಎ.ಕೆ 7ನೇ ತರಗತಿ ಮತ್ತು ಜಿಯಾಶ್ರೀ.ಎನ್ 8ನೇ ತರಗತಿ ಇವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಶಾಲಾ ಮುಖ್ಯೋಪಾಧ್ಯಾಯರಾದ ಭವಾನಿ ಹೆಚ್.ಟಿ. ದೈ.ಶಿ.ಶಿಕ್ಷಕರಾದ ಸಂದೇಶ್.ಬಿ.ಎಲ್. ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ.