ಅಧಿಕಾರಿಗಳ ಮನವೊಲಿಸಿ ಇದರಲ್ಲಿ ಅಲ್ಪಸ್ವಲ್ಪ ಹಣವನ್ನು ಬಿಡುಗಡೆ ಮಾಡಿಸಿ ಅಗತ್ಯ ಕಾಮಗಾರಿಗಳನ್ನು ಮಾಡಿಸಲಾಗುತ್ತಿದೆ. ಸರ್ಕಾರ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ತಾಲೂಕಿನ ರಸ್ತೆಗಳು ಗುಂಡಿ ಬಿದ್ದಿವೆ. ಕನಿಷ್ಠ 100 ಕೋಟಿ ರು.ಅನುದಾನ ಬಿಡುಗಡೆ ಮಾಡಿದರೆ ನೆಮ್ಮದಿಯಿಂದ ಹಳ್ಳಿಗಾಡಿನ ಜನತೆ ಓಡಾಡಬಹುದಾಗಿದೆ.

ಕನ್ನಡಪ್ರಭ ವಾರ್ತೆ ಕಿಕ್ಕೇರಿ

ಮೂಲ ಸೌಲಭ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಶುದ್ಧ ನೀರು, ರಸ್ತೆ ಸಂಪರ್ಕಕ್ಕಾಗಿ ಮೊದಲ ಆದ್ಯತೆ ನೀಡುವುದಾಗಿ ಶಾಸಕ ಎಚ್.ಟಿ.ಮಂಜು ತಿಳಿಸಿದರು.ಸೊಳ್ಳೇಪುರ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ರಸೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲೇ ಕೆ.ಆರ್.ಪೇಟೆ ತಾಲೂಕು ಅತೀ ಹೆಚ್ಚು ಭೌಗೋಳಿಕವಾಗಿ ವಿಸ್ತಾರ ಹೊಂದಿದೆ. ಆದರೆ ಸರ್ಕಾರದಿಂದ ಅನುದಾನ ಮಾತ್ರ ಅತ್ಯಲ್ಪ ಎಂದು ಬೇಸರ ವ್ಯಕ್ತಪಡಿಸಿದರು.

ಹೋಬಳಿಯ ಮಾದಿಹಳ್ಳಿ ಹಾಗೂ ಗೊಂದಿಹಳ್ಳಿ ಸೇತುವೆ ಪುನರ್ ನಿರ್ಮಾಣ ಮತ್ತಿತರ ಯೋಜನೆಗಳಿಗೆ ಬಿಜೆಪಿ ಸರ್ಕಾರ ಇದ್ದಾಗ 35 ಕೋಟಿ ರು. ಬಿಡುಗಡೆ ಮಾಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಅನುದಾನವನ್ನು ವಾಪಸ್ಸು ಪಡೆದಿದೆ ಎಂದು ದೂರಿದರು.

ಅಧಿಕಾರಿಗಳ ಮನವೊಲಿಸಿ ಇದರಲ್ಲಿ ಅಲ್ಪಸ್ವಲ್ಪ ಹಣವನ್ನು ಬಿಡುಗಡೆ ಮಾಡಿಸಿ ಅಗತ್ಯ ಕಾಮಗಾರಿಗಳನ್ನು ಮಾಡಿಸಲಾಗುತ್ತಿದೆ. ಸರ್ಕಾರ ಅನುದಾನ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ತಾಲೂಕಿನ ರಸ್ತೆಗಳು ಗುಂಡಿ ಬಿದ್ದಿವೆ. ಮತದಾರರು ಶಾಪ ಹಾಕುತ್ತಿದ್ದಾರೆ. ಕನಿಷ್ಠ 100 ಕೋಟಿ ರು.ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದರೆ ನೆಮ್ಮದಿಯಿಂದ ಹಳ್ಳಿಗಾಡಿನ ಜನತೆ ಓಡಾಡಬಹುದಾಗಿದೆ ಎಂದು ನುಡಿದರು.

ಇದೇ ವೇಳೆ ಸಮೀಪದ ಶ್ರವಣೂರು, ಚಿಕ್ಕಮಂದಗರೆ, ಗದ್ದೆಹೊಸೂರು, ಮೂಡನಹಳ್ಳಿ, ಆಲೇನಹಳ್ಳಿ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಗ್ರಾಪಂ ಸದಸ್ಯ ಎಸ್.ಕೆ.ಬಾಲಕೃಷ್ಣ, ಜೆಡಿಎಸ್ ಮುಖಂಡ ಐಕನಹಳ್ಳಿ ಕೃಷ್ಣೇಗೌಡ, ಶೇಖರ್, ನಿವೃತ್ತ ಸರ್ವೇ ಅಧಿಕಾರಿ ಪುಟ್ಟೇಗೌಡ, ಕೃಷ್ಣೇಗೌಡ, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ತಾಲೂಕು ಸಹಕಾರ ಅಭಿವೃದ್ದಿ ಅಧಿಕಾರಿ ಎಚ್.ಬಿ.ಭರತ್‌ಕುಮಾರ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್, ಕುಮಾರಸ್ವಾಮಿ ಮತ್ತಿತರರಿದ್ದರು.

ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಕನ್ನಡಪ್ರಭ ವಾರ್ತೆ ಹಲಗೂರುಗ್ರಾಮೀಣ ಪ್ರದೇಶದ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಸುತ್ತಮುತ್ತಲಿನ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪುನರ್ವಸು ಫೌಂಡೇಷನ್ ಅಧ್ಯಕ್ಷೆ ಡಾ.ಅರುಣಾ ತಿಳಿಸಿದರು.

ಮಾತೃಶ್ರೀ ರಮಾಬಾಯಿ ಅಂಬೇಡ್ಕರ್ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಂಗಳೂರು ಮತ್ತು ಪುನರ್ವಸು ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಹಲಗೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಉಚಿತ ದಂತ ಚಿಕಿತ್ಸೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.ಕಳೆದ ಎರಡು ವರ್ಷಗಳಿಂದ ಬ್ಯಾಡರಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತಿದೆ. ಇಂದು ನೂರಕ್ಕೂ ಹೆಚ್ಚು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಆರೋಗ್ಯ ಮತ್ತು ದಂತ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವೇಳೆ ದಂತ ವೈದ್ಯರಾದ ಡಾ.ಜೆ.ಎನ್.ರುಕ್ಮಿಣಿ, ಡಾ.ಎಂ.ಎನ್.ದೀಪ್ತಿ, ಡಾ.ದರ್ಶಿನಿಕುಮಾರ್, ಡಾ.ವೈಷ್ಣವಿ ಉಮೇಶ್, ಡಾ.ಸಿ.ವಂದಿತಾ, ಡಾ.ಶಿಲ್ಪಾ, ದೀಕ್ಷಾ ಬೆಂಜಮಿನ್, ಡಾ.ದೇವಸ್ಮಿತಾ, ಡಾ.ಫಾತಿಮಾ ಕೌಸರ್ ಮಿರ್ಜಾ, ಡಾ.ಹಾಡಿಯಾ ಜೈನಬ್, ನಾಗರಾಜು, ಪುನರ್ವಸು ಫೌಂಡೇಷನ್ ಮಂಚೇಗೌಡ, ಮುಖಂಡರಾದ ಎಸ್.ಉಮೇಶ್, ಭಗವಾನ್, ಕೆ.ಜಿ.ಸಿದ್ದಲಿಂಗಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.