ಸಾರಾಂಶ
ಚಿಕ್ಕಮಗಳೂರು, ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮತ್ತು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ ಎಂದು ರಾಜ್ಯದ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
- ಕೆಳ ಮಲ್ಲಂದೂರು ಗ್ರಾಮದಲ್ಲಿ ವಿದ್ಯುತ್ ಪ್ರಸರಣ ಉಪ ಕೇಂದ್ರದ ಕಾಮಗಾರಿಗೆ ಶಂಕು ಸ್ಥಾಪನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮತ್ತು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ ಎಂದು ರಾಜ್ಯದ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲಂದೂರು (ಕೆಳ ಮಲ್ಲಂದೂರು) ಗ್ರಾಮದಲ್ಲಿ ನಿರ್ಮಾಣ ಗೊಳ್ಳಲಿರುವ ವಿದ್ಯುತ್ ಪ್ರಸರಣ ಉಪ ಕೇಂದ್ರ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿ ಮಾತನಾಡಿದರು.ಈ ವಿದ್ಯುತ್ ಉಪ ಕೇಂದ್ರದಿಂದ 6.769 ಎಂ.ಯು ನಷ್ಟು ವಿದ್ಯುತ್ ನಷ್ಟದ ಉಳಿಕೆ ಆಗಲಿದೆ. ಆಲ್ದೂರು, ಚಿಕ್ಕಮಗಳೂರು ಮತ್ತು ಬಾಳೆಹೊನ್ನೂರು ವಿದ್ಯುತ್ ಉಪ ಕೇಂದ್ರಗಳ ಮೇಲಿನ ಒತ್ತಡ ಕಡಿಮೆ ಗೊಳಿಸು ತ್ತದೆ ಮತ್ತು ವೋಲ್ಟೇಜ್ ರೆಗ್ಯುಲೇಷನ್ ಶೇ. 7.89 ರವರೆಗೂ ಸುಧಾರಿಸಬಹುದು. ಇದರಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತದೆ. ಕಾಮಗಾರಿಯನ್ನು ಶೀಘ್ರವಾಗಿ ಮತ್ತು ವ್ಯವಸ್ಥಿತವಾಗಿ ಪೂರೈಸುವಂತೆ ಗುತ್ತಿಗೆ ದಾರರಿಗೆ ಸೂಚನೆ ನೀಡಿದರು.ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಮಾತನಾಡಿ, ಮಲ್ಲಂದೂರು ಗ್ರಾಮ ಸೇರಿದಂತೆ ಇತರೆ ಸುತ್ತಮುತ್ತಲಿನ ಗ್ರಾಮಗಳಿಗೆ ಕಡಿಮೆ ವೋಲ್ಟೇಜ್ ಸಮಸ್ಯೆ ಇದೆ. ಮಲ್ಲಂದೂರು ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಿಸುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಾದ ಆವತಿ, ಬಾಗನೆ ಹೆದ್ದಾಳು, ಜೋಳದಾಳು, ಕೆರೆಮಕ್ಕಿ, ಸಿರವಾಸೆ, ಬ್ಯಾರವಳ್ಳಿ, ಬಾಗೆಮನೆ, ಶಿರಗುರು, ಸಿದ್ದಾಪುರ ಮತ್ತು ಇತರೆ ಗ್ರಾಮಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಲು ಅನುಕೂಲವಾಗಲಿದೆ ಎಂದರು. ಮೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್ ಕೆ. ಸುರೇಶ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೆಸ್ಕಾಂನ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.ಪೋಟೋ ಫೈಲ್ ನೇಮ್ 20 ಕೆಸಿಕೆಎಂ 1ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಮಲ್ಲಂದೂರು (ಕೆಳ ಮಲ್ಲಂದೂರು) ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ವಿದ್ಯುತ್ ಪ್ರಸರಣ ಉಪ ಕೇಂದ್ರದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಶಾಸಕರಾದ ಟಿ.ಡಿ.ರಾಜೇಗೌಡ, ನಯನಾ ಮೋಟಮ್ಮ, ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ.ಗೋಪಾಲಕೃಷ್ಣ ಇದ್ದರು.