ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ

| Published : Nov 02 2024, 01:27 AM IST

ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರೂ ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರೂ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಕಾಂಗ್ರೆಸ್ ಕಚೇರೀಲಿ ಕನ್ನಡ ಧ್ವಜರೋಹಣ । ವಿಜೃಂಭಣೆಯಿಂದ 69ನೇ ರಾಜ್ಯೋತ್ಸವ ಆಚರಣೆ । ಕನ್ನಡದ ಬೆಳವಣಿಗೆಗೆ ಶ್ರಮಿಸೋಣ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕನ್ನಡ ನಾಡು ನುಡಿ ವಿಚಾರದಲ್ಲಿ ನಾವೆಲ್ಲರು ಒಂದಾಗಬೇಕಾಗಿದೆ. ಕನ್ನಡ ನಾಡು ಕಟ್ಟಲು ಅನೇಕ ಮಹನೀಯ ತ್ಯಾಗವನ್ನು ಸ್ಮರಿಸಿಕೊಳ್ಳುವ ಜತೆಗೆ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರೂ ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರೂ ಹೆಚ್ಚಿನ ಅದ್ಯತೆ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಹೇಳಿದರು.

ಸತ್ತಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕಾಂಗ್ರೆಸ್ ಮುಂಭಾಗ ಶುಕ್ರವಾರ ಕನ್ನಡ ಧ್ವಜಾರೋಹಣ ಮಾಡಿ, ಗೌರವ ವಂದನೆ ಸಲ್ಲಿಸಿ ಮಾತನಾಡಿದರು.

ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಿ, ಏಕೀಕರಣಗೊಳಿಸಿ ನೂತನವಾಗಿ ಕರ್ನಾಟಕ ಎಂದು ನಾಮಕರಣ ಮಾಡಿದ ಸುದಿನವಾಗಿದೆ. ನಾವೆಲ್ಲರೂ ಕನ್ನಡ ನಾಡು, ನುಡಿ ಜಲ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುವ ಜತೆಗೆ ಕನ್ನಡದ ಬೆಳವಣಿಗೆಗೆ ಎಲ್ಲರೂ ಶ್ರಮಿಸೋಣ ಎಂದರು.

ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹದೇವ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಬ್ಲಾಕ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಚುಡಾ ಸದಸ್ಯರಾದ ದ್ವಾರಕಿ, ಎಸ್.ಪುಟ್ಟಸ್ವಾಮಿ, ನಗರಸಭಾ ಸದಸ್ಯರಾದ ಚಿನ್ನಮ್ಮ, ಪದ್ಮ ಪುರುಷೋತ್ತಮ್, ರಾಮಸಮುದ್ರ ನಾಗರಾಜು, ಎ.ಎಚ್.ಎನ್. ಖಾನ್, ಕರಿನಂಜನಪುರ ಸ್ವಾಮಿ, ಅಯೂಬ್ ಖಾನ್, ಮರಿಯಾಲ ಕುಮಾರ್, ರವಿಗೌಡ, ಜಿಪಂ ಮಾಜಿ ಸದಸ್ಯರಾದ ಕಾವೇರಿ ಶಿವಕುಮಾರ್, ರಮೇಶ್, ಮಹದೇವಯ್ಯ, ಪೃಥ್ವಿ, ಮರಿಯಾಲ ನಾಗರಾಜು ಇದ್ದರು.