ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ 20ರಿಂದ 30 ವರ್ಷಗಳಿಂದ ನೆನಗುದಿಗೆ ಬಿದ್ದಿರುವ ರಸ್ತೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದು ಹಂತಹಂತವಾಗಿಎಲ್ಲಾ ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿಯ ಹಸಿರುವಳ್ಳಿ ಗ್ರಾಪಂ ವ್ಯಾಪ್ತಿಯ ಜಕ್ಕನಹಳ್ಳಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜಕ್ಕನಹಳ್ಳಿಯಲ್ಲಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಮೀನು ಮಾಲೀಕರ ಮನವೊಲಿಸಿ ಜಮೀನು ರಸ್ತೆಗೆ ಬಿಟ್ಟುಕೊಡುವುದಾದರೆ ಅನುದಾನ ನೀಡಿ ರಸ್ತೆ ಅಭಿವೃದ್ಧಿಪಡಿಸಲು ಸಿದ್ದನಿದ್ದೇನೆ. ಪ್ರಸ್ತುತ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳಬೇಕು. ಇದಕ್ಕೆ ಸಾರ್ವಜನಿಕರು ನಿಗಾ ವಹಿಸಬೇಕು. ಯಾವುದೇ ಅನುಮಾನಗಳು ಬಂದಲ್ಲಿ ಅಧಿಕಾರಿಗಳಿಗೆ ಅಥವಾ ನನಗೆ ಮಾಹಿತಿ ನೀಡಬೇಕು. ರಸ್ತೆಗಳು ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿರಬೇಕು ಎಂದು ಹೇಳಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಹರ್ಷ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತೇಗೌಡ, ಮುಖಂಡರಾದ ಎಚ್.ಎಂ.ಕುಮಾರ್, ವಾಸುದೇವ್, ಅನಂತಕೃಷ್ಣ, ಚನ್ನಕೃಷ್ಣ, ಪುರುಷೋತ್ತಮ್‍ಗೌಡ, ಮಂಜುನಾಥ್, ದೊಡ್ಡಬೆಲೆ ಗಂಗಣ್ಣ, ಚಿಕ್ಕನಹಳ್ಳಿ ಸಿದ್ದರಾಜು, ರಂಗನಾಥ್, ವಾದಕುಂಟೆ ರಮೇಶ್, ನರಸಿಂಹಮೂರ್ತಿ ಇತರರು ಉಪಸ್ಥಿತರಿದ್ದರು.ಪೋಟೋ 7 : ತ್ಯಾಮಗೊಂಡ್ಲು ಹೋಬಳಿಯ ಜಕ್ಕನಹಳ್ಳಿ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಚಾಲನೆ ನೀಡಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಹರ್ಷ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತೇಗೌಡ ಇತರರಿದ್ದರು.