ಸಾರಾಂಶ
Ambedkar Jayanthutsava: A grand procession
ಕವಿತಾಳ: ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯ. ಓದಿನ ಕಡೆ ಹೆಚ್ಚಿನ ಗಮನ ಕೊಡುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಸಮೀನಾಭಾನು ಹೇಳಿದರು.
ಕರ್ನಾಟಕ ಪಬ್ಲಿಕ್ ಶಾಲೆ ಕಾಲೇಜ್ ವಿಭಾಗವಾದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ 2024-25ನೇ ಸಾಲಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿ, ಮೊಬೈಲ್ ಬಳಕೆಯಿಂದ ಮಕ್ಕಳ ಓದಿಗೆ ಹಿನ್ನಡೆಯಾಗುತ್ತಿದೆ. ಪುಸ್ತಕಗಳ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಪ್ರಾಂಶುಪಾಲ ಶಕುಂತಲಾ ಮಾತನಾಡಿದರು. ಶಿಕ್ಷಕರಾದ ಶರಣಪ್ಪ ಮಾತನಾಡಿದರು. ರಾಘವೇಂದ್ರ ಕುರುಕುಂದ, ಬಸವರಾಜ ಮಸ್ಕಿ, ಶಾಕಿರ್, ಶರಣಬಸವ ಹಿರೇಮಠ, ಬಸವರಾಜೇಶ್ವರಿ, ಚಂದ್ರಶೇಖರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 2023-24ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
--------