ಸಾರಾಂಶ
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಆಕರ್ಷಕ ರೊಬೊಟಿಕ್ ಬಟರ್‌ಫ್ಲೈ ಶೋ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇದಕ್ಕೆ ನಗರದ ಕದ್ರಿ ಪಾರ್ಕ್‌ನಲ್ಲಿ ಚಾಲನೆ ನೀಡಲಾಯಿತು. ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಆಕರ್ಷಕ ರೊಬೊಟಿಕ್ ಬಟರ್‌ಫ್ಲೈ ಶೋ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇದಕ್ಕೆ ನಗರದ ಕದ್ರಿ ಪಾರ್ಕ್‌ನಲ್ಲಿ ಚಾಲನೆ ನೀಡಲಾಯಿತು. ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.ಕರಾವಳಿ ಉತ್ಸವ ಮುಗಿಯುವವರೆಗೂ ಅಂದರೆ ಸುಮಾರು 1 ತಿಂಗಳ ಕಾಲ ಈ ಬಟರ್‌ಫ್ಲೈ ಶೋ ಜನರಿಗೆ ಮಾಹಿತಿ, ಮನರಂಜನೆ ಒದಗಿಸಲಿದೆ. ಸಂಜೆ 4ರಿಂದ ರಾತ್ರಿ 9ರವರೆಗೆ ಪ್ರದರ್ಶನ ಇರಲಿದೆ.ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಮೊದಲ ಬಾರಿಗೆ ಇಂತಹ ಶೋ ಆಯೋಜಿಸಿರುವುದು ಅಭಿನಂದನಾರ್ಹ ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ಶಾಲಾ ಮಕ್ಕಳಿಗೆ ಶೇ.50 ರಿಯಾಯಿತಿ ದರ ಇರಲಿದೆ, ಚಿಟ್ಟೆಗಳ ಕುರಿತ ಸಂಪೂರ್ಣ ಮಾಹಿತಿ ಇದರಲ್ಲಿ ಲಭ್ಯವಾಗಲಿದೆ ಎಂದರು.ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು. ಈ ಶೋನಲ್ಲಿ ತರಹೇವಾರಿ ಚಿಟ್ಟೆಗಳನ್ನು ಆಕರ್ಷಕವಾಗಿ ರೋಬೊಟಿಕ್ ಮಾದರಿಯಲ್ಲಿ ತಯಾರು ಮಾಡಿ ಪ್ರದರ್ಶನ ಮಾಡಲಾಗುತ್ತದೆ. ಅಳಿವಿನಂಚಿಗೆ ಸಾಗುತ್ತಿರುವ ಬಟರ್‌ಫ್ಲೈಗಳ ಮಾದರಿಗಳನ್ನೂ ನೋಡಬಹುದು.
ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್, ಸಹಾಯಕ ಆಯುಕ್ತ ಹರ್ಷವರ್ಧನ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರಾಜೇಶ್, ವಾರ್ತಾಧಿಕಾರಿ ಖಾದರ್ ಶಾ ಇದ್ದರು.