ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಭಾನುವಾರ ಕೊಡಗು ಜಿಲ್ಲಾ ಪ್ರವಾಸ ನಡೆಸುವರು. ಜು. 5ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ್‌ ಕರ್ಜಗಿ ತಿಳಿಸಿದ್ದಾರೆ.

ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಭಾನುವಾರ ಕೊಡಗು ಜಿಲ್ಲಾ ಪ್ರವಾಸ ನಡೆಸುವರು. ಜು. 5ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ್‌ ಕರ್ಜಗಿ ತಿಳಿಸಿದ್ದಾರೆ.

---------------------------------------

ಮೀನು ಮರಿ ವಿತರಣೆ

ಮಡಿಕೇರಿ : ಪ್ರತಿ ವರ್ಷದಂತೆ 2026-27ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗದಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನು ಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು.

ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲೂಕಿನ ವಿನಯ್-9769070850, ಸೋಮವಾರಪೇಟೆ ತಾಲೂಕಿನ ನಿರ್ವಾಣಿ-9448918782, 7338218782, ವಿರಾಜಪೇಟೆ ತಾಲೂಕಿನ-ನಿಶಾಂತ್ ಬಿ.ಕೆ. 9731363143, ಕುಶಾಲನಗರ ತಾಲೂಕಿನ ಸಚಿನ್- 9886717626 ಹಾಗೂ ಮಂಜು-8296765595 ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.