ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸೋಮವಾರ ಮೀನುಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಜರಾಯಿ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ, ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ, ಮೀನುಗಾರರ ಕಲ್ಯಾಣ ಹಾಗೂ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ.

- ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ಕಲ್ಪಿಸಲು ಚರ್ಚೆ

- - -

ದಾವಣಗೆರೆ: ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸೋಮವಾರ ಮೀನುಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಜರಾಯಿ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ, ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ, ಮೀನುಗಾರರ ಕಲ್ಯಾಣ ಹಾಗೂ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸರ್ಕಾರ ರೂಪಿಸಿರುವ ಯೋಜನೆಗಳ ಪ್ರಯೋಜನಗಳು ಅರ್ಹ ಮೀನುಗಾರರಿಗೆ ಸಮರ್ಪಕವಾಗಿ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮೀನುಗಾರರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಇಲಾಖೆಯ ಪ್ರಮುಖ ಆದ್ಯತೆಯಾಗಬೇಕು. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಇರುವ ಅವಕಾಶಗಳನ್ನು ಸಮರ್ಪಕ ಬಳಸಿಕೊಂಡು ಕ್ಷೇತ್ರದ ಬೆಳವಣಿಗೆಗೆ ವೇಗ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು, ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ಕಲ್ಪಿಸುವುದು ಹಾಗೂ ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಇಲಾಖೆ ಉನ್ನತ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-1ಕೆಡಿವಿಜಿ31, 32:

ಮುಜರಾಯಿ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಬೆಂಗಳೂರಿನ ವಿಧಾನಸೌಧದಲ್ಲಿ ಮೀನುಗಾರಿಕೆ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.