ಉಡುಪಿ: ಮಲ್ಪೆ ಬೀಚ್‌ನಲ್ಲಿ ಮೀನುಗಾರ ಮುಖಂಡ ಮಂಜು ಕೊಳ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಬಾಲ ನ್ಯಾಯಾ ಮಂಡಳಿಗೆ ಒಪ್ಪಿಸಲಾಗಿದೆ. ಬಂಧಿತರು ಪಲಿಮಾರು ನಿವಾಸಿಗಳಾದ ಅಮೃತ್ ಭಂಡಾರಿ (22), ಪ್ರಜ್ಞೇಶ್ (22), ಪುನಿತ್ ಪೂಜಾರಿ (24) ಮತ್ತು ಕಾರ್ಕಳ ಇನ್ನಾ ನಿವಾಸಿ ಅಭಿಜಿತ್ (20) ಹಾಗೂ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಸುಮಾರು 9.30 ಗಂಟೆಗೆ ಬೀಚ್‌ನಲ್ಲಿ ಕುಳಿತಿದ್ದ ಸಂತೋಷ್ ಎ. ಅಮೀನ್ ಹಾಗೂ ಅವರ ಸ್ನೇಹಿತರಾದ ಮಂಜುನಾಥ ಸಾಲಿಯಾನ್ ಯಾನೆ ಮಂಜು ಕೊಳ, ಧನುಷ್, ಲತೀಶ್ ಮತ್ತು ವರುಣ್ ಅವರೊಂದಿಗೆ ಅಮೃತ್ ಭಂಡಾರಿಯು ತನ್ನ ತಂಗಿಯ ವಿಚಾರದಲ್ಲಿ ತಗಾದೆ ತೆಗೆದಿದ್ದು, ಮಾತಿನ ಚಕಮಕಿ ನಡೆದು, ಮಂಜು ಕೊಳ ಅವರನ್ನು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ಆರೋಪಿ ಪ್ರಜ್ಞೇಶ್ ತಮ್ಮ ಪ್ಯಾಂಟ್‌ನ ಕಿಸೆಯಿಂದ ಚಾಕು ತೆಗೆದು ಮಂಜು ಕೊಳ ಅವರ ಹೊಟ್ಟೆಯ ಎಡ ಭಾಗಕ್ಕೆ ಇರಿದಿದ್ದು, ತೀವ್ರ ಗಾಯ ಉಂಟಾಗಿದೆ. ಅಲ್ಲದೆ ಇತರರ ಮೇಲೆಯೂ ಚಾಕು ಮತ್ತು ಕೈಯಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ದೂರಿನಂತೆ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಮಲ್ಪೆ ಸಿಪಿಐ ರಾಮಚಂದ್ರ ನಾಯಕ್ ಅವರ ಮಾರ್ಗದರ್ಶನದಲ್ಲಿ ಕಾರ್‍ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.ಮೀನುಗಾರ ಮುಖಂಡ ಮಂಜು ಕೊಳಗೆ ಚಾಕು ಇರಿತ: ನಾಲ್ವರ ಬಂಧನ
ಮಲ್ಪೆ ಬೀಚ್‌ನಲ್ಲಿ ಮೀನುಗಾರ ಮುಖಂಡ ಮಂಜು ಕೊಳ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
