ಸಾರಾಂಶ
ದೇಶದ ಕರಾವಳಿ ಜಿಲ್ಲೆಯ ಕಡಲ ತೀರ ಹಾಗೂ ಸಮುದ್ರ ಭಾಗದಲ್ಲಿ ನಿಗಾ ವಹಿಸಲು ರಕ್ಷಣಾ ಪಡೆಗಳಿಗೆ ಸಂಪೂರ್ಣ ಸಹಕಾರ ನೀಡಲು ಕರಾವಳಿ ಜಿಲ್ಲೆಯ ಮೀನುಗಾರರು ಸದಾ ಸಿದ್ಧವಾಗಿದ್ದಾರೆ
ಉಡುಪಿ : ಭಾರತ ಪಾಕಿಸ್ತಾನ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದೇಶದ ಕರಾವಳಿ ಜಿಲ್ಲೆಯ ಕಡಲ ತೀರ ಹಾಗೂ ಸಮುದ್ರ ಭಾಗದಲ್ಲಿ ನಿಗಾ ವಹಿಸಲು ರಕ್ಷಣಾ ಪಡೆಗಳಿಗೆ ಸಂಪೂರ್ಣ ಸಹಕಾರ ನೀಡಲು ಕರಾವಳಿ ಜಿಲ್ಲೆಯ ಮೀನುಗಾರರು ಸದಾ ಸಿದ್ಧವಾಗಿದ್ದಾರೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಕರ್ನಾಟಕ ಕರಾವಳಿಯ 330 ಕಿಲೋ ಮೀಟರ್ ವ್ಯಾಪ್ತಿಯ ಸಮುದ್ರ ತೀರ ಹಾಗೂ ಮೀನುಗಾರಿಕೆ ಸಂದರ್ಭದಲ್ಲಿ ಸಮುದ್ರದಲ್ಲಿ ನಿಗಾ ವಹಿಸಿ, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಬೋಟ್ ಗಳ ಬಗ್ಗೆ ತಕ್ಷಣ ಮಾಹಿತಿ ನೀಡಲು ಈಗಾಗಲೇ ಮೀನುಗಾರರಿಗೆ ಮಾಹಿತಿ ನೀಡಲಾಗಿದೆ.ಮೀನುಗಾರರು ಸದಾ ಕಡಲ ಸೈನಿಕರಂತೆ ದೇಶದ ರಕ್ಷಣೆಗೆ ಸದಾ ಬದ್ಧವಾಗಿದ್ದು, ಈಗಾಗಲೇ ಎಲ್ಲಾ ಬಂದರುಗಳ ಮೀನುಗಾರರ ಸಂಘದ ಮುಖಂಡರು ಮೀನುಗಾರರಿಗೆ ಅಗತ್ಯ ಮಾಹಿತಿ, ಸೂಚನೆಗಳನ್ನು ನೀಡಿದ್ದು ದೇಶದ ತುರ್ತು ಸಂದರ್ಭದಲ್ಲಿ ದೇಶ ಸೇವೆಗೆ ಸದಾ ಸಿದ್ಧರಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ನಗರದ ಬನ್ನಂಜೆ ಮಹಾಲಿಂಗೇಶ್ವರ ದೇವಾಲಯದಲ್ಲಿ ದೇಶ ಕಾಯುವ ಯೋಧರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.