ರಾಷ್ಟ್ರ, ರೈತರ ಅಭಿವೃದ್ಧಿಗೆ ಮೀನುಗಾರಿಕೆ ಸಹಕಾರಿ: ಡಾ.ಕೆ.ಸಿ ವೀರಣ್ಣ

| Published : Feb 11 2024, 01:51 AM IST

ರಾಷ್ಟ್ರ, ರೈತರ ಅಭಿವೃದ್ಧಿಗೆ ಮೀನುಗಾರಿಕೆ ಸಹಕಾರಿ: ಡಾ.ಕೆ.ಸಿ ವೀರಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಡಾ.ಕೆ.ಸಿ ವೀರಣ್ಣ ಉದ್ಘಾಟಿಸಿ ಮಾತನಾಡಿದರು.

ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಡಾ.ಕೆ.ಸಿ ವೀರಣ್ಣ ಉದ್ಘಾಟಿಸಿ ಮಾತನಾಡಿದರು.ಕನ್ನಡಪ್ರಭ ವಾರ್ತೆ ರಾಯಚೂರು

ಮೀನುಗಾರಿಕೆ ವಲಯವು ರೈತರಿಗೆ ನಿರಂತರ ಉದ್ಯೋಗ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ, ಪೌಷ್ಟಿಕ ಆಹಾರದ ಭದ್ರತೆ ಸೇರಿದಂತೆ ರಾಷ್ಟ್ರ ಹಾಗೂ ರೈತರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ ವೀರಣ್ಣ ಹೇಳಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ, ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ, ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಮೀನುಗಾರಿಕೆ ಮಹಾವಿದ್ಯಾಲಯ ಮತ್ತು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರಗಳ ವತಿಯಿಂದ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರಾಯಚೂರು, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚಾಗಿದ್ದು, ಸಸಾರಜನಕದ ಕೊರತೆಯಿಂದ ಬರುವ ರೋಗಕ್ಕೆ ಇಲ್ಲಿನ ಜನರು ತುತ್ತಾಗುತ್ತಾರೆ. ಮತ್ತು ಮಕ್ಕಳ ಬುದ್ಧಿಶಕ್ತಿ ಬೆಳವಣಿಗೆಯಲ್ಲಿ ಸಾಕಷ್ಟು ಸಮಸ್ಯೆ ಕಾಣುತ್ತೇವೆ. ಈ ನಿಟ್ಟಿನಲ್ಲಿ ಪ್ರೋಟಿನ್ ಹೆಚ್ಚಾಗಿ ಸಿಗುವುದು ಮೀನಿನಲ್ಲಿ ಮಾತ್ರವಾಗಿರುತ್ತದೆ ಎಂದರು.

ಆಹಾರ ಭದ್ರತೆ, ರೈತರ ಆರ್ಥಿಕ ಭದ್ರತೆಗೆ ಮೀನುಗಾರಿಕೆ ವಲಯ ಹೆಚ್ಚಿನ ನೆರವನ್ನು ನೀಡುತ್ತಿದ್ದು, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಮೀನುಗಾರಿಕೆಯ ಮಾರಾಟ, ರಫ್ತು, ಉತ್ಪಾದನಾ ಘಟಕಗಳನ್ನು ಸರಪಳಿಯ ಮಾದರಿಯಲ್ಲಿ ಜನರಿಗೆ ನೀಡಲಾಗುತ್ತದೆ ಎಂದರು.

ಈ ಯೋಜನೆಯಿಂದ ರೈತರಿಗೆ ಅತ್ಯಂತ ಹೆಚ್ಚಿನ ಅನುಕೂಲವಾಗಲಿದ್ದು, ರೈತಾಪಿ ವರ್ಗ ಈ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ತಮ್ಮ ಆರ್ಥಿಕ ಹಾಗೂ ಸಾಮಾಜಿಕ ಬದುಕನ್ನು ಉತ್ತಮಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೈದ್ರಾಬಾದ್‌ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಲ್. ನರಸಿಂಹಮೂರ್ತಿ, ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ಎಚ್.ಎನ್ ಆಂಜನೇಯಪ್ಪ, ಕೃಷಿ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಎಸ್.ಬಿ ಗೌಡಪ್ಪ, ಹಣಕಾಸು ನಿಯಂತ್ರಣಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಗುರುರಾಜ ಸುಂಕದ, ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯಸ್ಥ ನೇಮಿ ಚಂದ್ರಪ್ಪ, ಷಡಾಕ್ಷರಿ, ಸೈಯದ್, ಶ್ರೀನಿವಾಸ ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.