ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಎಚ್.ಎಂ.ರೇವಣ್ಣ

| Published : Feb 19 2025, 12:47 AM IST

ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಎಚ್.ಎಂ.ರೇವಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಉಡುಪಿರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಜನರ ಆರ್ಥಿಕ ಸ್ಥಿತಿ ಉತ್ತಮಗೊಂಡು ಸಾಮಾಜಿಕ ಪರಿವರ್ತನೆಯಾಗುತ್ತಿದೆ. ಈ ಮೂಲಕ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 1.22 ಕೋಟಿ ಫಲಾನುಭವಿಗಳ ಖಾತೆಗೆ 35,180 ಕೋಟಿ ರು. ಹಾಗೂ ಜಿಲ್ಲೆಯಲ್ಲಿ 2,24,348 ಫಲಾನುಭವಿಗಳ ಖಾತೆಗೆ 648.52 ಕೋಟಿ ರು. ಗಳನ್ನು ಡಿ.ಬಿ.ಟಿ. ಮೂಲಕ ವರ್ಗವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ 1.63 ಕೋಟಿ ಫಲಾನುಭವಿಗಳಿಗೆ 12,589 ಕೋಟಿ ರು. ಹಾಗೂ ಜಿಲ್ಲೆಯಲ್ಲಿ 3,39,305 ಫಲಾನುಭವಿಗಳಿಗೆ 342.16 ಕೋಟಿ ರು. ಗಳ ವಿದ್ಯುತ್ ವೆಚ್ಚವನ್ನು ಭರಿಸಲಾಗಿದೆ.ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 63.68 ಕೋಟಿ ಫಲಾನುಭವಿಗಳಿಗೆ ಖಾತೆಗೆ 10,452 ಕೋಟಿ ರು. ಹಾಗೂ ಜಿಲ್ಲೆಯಲ್ಲಿ 1.21 ಕೋಟಿ ಫಲಾನುಭವಿಗಳಿಗೆ 202.49 ಕೋಟಿ ರು.ಗಳನ್ನು ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 397 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ, 9,665 ಕೋಟಿ ರು. ಹಾಗೂ ಜಿಲ್ಲೆಯಲ್ಲಿ 2.16 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು 80.45 ಕೋಟಿ ರು. ಭರಿಸಲಾಗಿದೆ.ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 2.51 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡು 270.17 ಕೋಟಿ ರು.ಗಳನ್ನು ಅವರ ಖಾತೆಗೆ ಪಾವತಿಸಲಾಗಿದೆ. ಜಿಲ್ಲೆಯಲ್ಲಿ 3,494 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 3.75 ಕೋಟಿ ರು.ಗಳನ್ನು ಅವರಿಗೆ ಪಾವತಿಸಲಾಗಿದೆ ಎಂದರು.ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅಧಿಕ ಫಲಾನುಭವಿಗಳಿರುವುದು ಕಂಡು ಬಂದಿದೆ ಎಂದರು.ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್, ಗೀತಾ ವಾಗ್ಳೆ ಹಾಗೂ ಸಂತೋಷ್ ಕುಲಾಲ್, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು, ತಹಸೀಲ್ದಾರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಮಣಿಪಾಲ ರಜತಾದ್ರಿಯ ಜಿ.ಪಂ.ನಲ್ಲಿ ತೆರೆಯಲಾದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಎಚ್.ಎಂ. ರೇವಣ್ಣ ಉದ್ಘಾಟಿಸಿದರು.