ಸಾರಾಂಶ
ಸಂಡೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸೋಮವಾರ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರ ಪರವಾಗಿ ತಾಲ್ಲೂಕಿನ ಯಶವಂತನಗರ, ಸುಶೀಲಾನಗರ, ಕೃಷ್ಣಾನಗರ, ಭುಜಂಗನಗರ ಹಾಗೂ ನರಸಿಂಗಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ, ಮತಯಾಚಿಸಿದರು.ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವರು, ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಿಂದ ಜನತೆಗೆ ತುಂಬಾ ಅನುಕೂಲವಾಗಿದೆ. ನನ್ನ ಮತ್ತು ಈ. ತುಕಾರಾಂ ಅವರ ಆಡಳಿತಾವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸಲಾಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮುಂದುವರಿಕೆಗಾಗಿ ಜನತೆ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರನ್ನು ಬೆಂಬಲಿಸಿ, ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಸಂಸದ ಈ. ತುಕಾರಾಂ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಮತಯಾಚಿಸಿದರು.ಮುಖಂಡರಾದ ಅಕ್ಷಯ್ ಲಾಡ್, ಕೆ. ಸತ್ಯಪ್ಪ, ಮಹಮ್ಮದ್ ಅಯೂಬ್, ಬಾಣ್ದಾರ್ ಸುಭಾನ್‌ಸಾಬ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಡೂರು ತಾಲೂಕಿನ ಕೃಷ್ಣಾನಗರ ಗ್ರಾಮದಲ್ಲಿ ಸೋಮವಾರ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ ತುಕಾರಾಂ ಅವರ ಪರವಾಗಿ ಪ್ರಚಾರ ನಡೆಸಿ ಮತಯಾಚಿಸಿದರು.