5 ಗ್ಯಾರಂಟಿಗಳು ಯೋಗೇಶ್ವರ್ ಗೆಲುವಿಗೆ ಸಹಕಾರಿ: ಗ್ಯಾರಂಟಿ ಯೋಜನಾ ಸಮಿತಿಯ ಪ್ರಕಾಶ್ ಗೌಡ

| Published : Nov 13 2024, 12:50 AM IST

5 ಗ್ಯಾರಂಟಿಗಳು ಯೋಗೇಶ್ವರ್ ಗೆಲುವಿಗೆ ಸಹಕಾರಿ: ಗ್ಯಾರಂಟಿ ಯೋಜನಾ ಸಮಿತಿಯ ಪ್ರಕಾಶ್ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತವಾಗಿದೆ. ಗ್ಯಾರಂಟಿ ಯೋಜನೆಗಳು ಅವರ ಕೈಯಡಿಯಲ್ಲಿವೆ ಎಂದು ಚನ್ನರಾಯಪಟ್ಟಣ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್‌.ಪಿ.ಪ್ರಕಾಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು. ನುಗ್ಗೇಹಳ್ಳಿಯಲ್ಲಿ ಪ್ರಚಾರ ವೇಳೆ ಮಾತನಾಡಿದರು.

ಮಾಳುರು ಪಟ್ಟಣದಲ್ಲಿ ಯೋಗೇಶ್ವರ್‌ ಪರ ಪ್ರಚಾರ

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಕೈ ಹಿಡಿದಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತವಾಗಿದೆ. ಗ್ಯಾರಂಟಿ ಯೋಜನೆಗಳು ಅವರ ಕೈಯಡಿಯಲ್ಲಿವೆ ಎಂದು ಚನ್ನರಾಯಪಟ್ಟಣ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಎಲ್‌.ಪಿ.ಪ್ರಕಾಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ನೇತೃತ್ವದಲ್ಲಿ ಚನ್ನಪಟ್ಟಣದ ಮಾಳುರು ಪಟ್ಟಣ ಸೇರಿದಂತೆ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಗ್ಯಾರೆಂಟಿ ಯೋಜನೆ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಹಾಗೂ ತಾಲೂಕಿನ ಕಾಂಗ್ರೆಸ್ ಮುಖಂಡರಾದ ಸಿ.ಎಸ್.ಪುಟ್ಟೇಗೌಡ ಹಾಗೂ ಎಂ.ಎ.ಗೋಪಾಲಸ್ವಾಮಿ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರ ಮಾರ್ಗದರ್ಶನದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ವತಿಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೂರು ಪಟ್ಟಣ ಪಂಚಾಯಿತಿ ಹಾಗೂ ಕ್ಷೇತ್ರದ ವಿವಿಧೆಡೆ ಸ್ಥಳೀಯ ಮುಖಂಡರು ಮತ್ತು ನೂರಾರು ಕಾರ್ಯಕರ್ತರ ಜೊತೆಗೂಡಿ ಬಿರುಸಿನ ಪ್ರಚಾರ ನಡೆಸಲಾಗಿದೆ. ಕ್ಷೇತ್ರದಲ್ಲಿ ಈ ಹಿಂದೆ ಸಿ.ಪಿ.ಯೋಗೇಶ್ವರ್ ಅವರು ಶಾಸಕರಾದ ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿರುವ ನೀರಾವರಿ ಯೋಜನೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳು ಅವರ ಗೆಲುವಿಗೆ ಹೆಚ್ಚು ಸಹಕಾರಿಯಾಗಲಿವೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪೂರ್ಣ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದ್ದು ಉಪಚುನಾವಣೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಅಧಿಕ ಮತಗಳಿಂದ ಸಿ.ಪಿ.ಯೋಗೇಶ್ವರ್ ಅವರು ಗೆಲ್ಲುವುದು ನಿಶ್ಚಿತವಾಗಿದೆ ಎಂದು ಹೇಳಿದರು.

ಜೆಡಿಎಸ್ ನಾಯಕರ ಅಪಪ್ರಚಾರಕ್ಕೆ ಚನ್ನಪಟ್ಟಣ ಕ್ಷೇತ್ರದ ಜನ ತಲೆ ಕೆಡಿಸಿಕೊಳ್ಳುವುದಿಲ್ಲ. ರಾಜ್ಯದ ಅಭಿವೃದ್ಧಿ ಹಾಗೂ ಮುಂಬರುವ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಲಿದ್ದಾರೆ ಎಂದರು.

ಚನ್ನಪಟ್ಟಣ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರು ಸೇರಿದಂತೆ ಸಮಿತಿಯ ಎಲ್ಲಾ ಸದಸ್ಯರು ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸುವ ಮೂಲಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಮನವರಿಕೆ ಮಾಡಿಕೊಡಲಾಗುತ್ತದೆ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಜನಾರ್ಧನ್, ಅರಳಾಪುರ ನಾಗೇಶ್, ಬೆಕ್ಕ ಕೆಂಪೇಗೌಡ, ಚೋಳೇನಹಳ್ಳಿ ಗಣೇಶ್, ಕಾಂತರಾಜುಪುರ ನಾಗೇಶ್, ಲಕ್ಕಿ ಹಳ್ಳಿ ಸುರೇಶ್, ಇತರರು ಹಾಜರಿದ್ದರು.