ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿ: ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ. ಚುನಾವಣೆ ಪೂರ್ವದಲ್ಲಿ ಪಂಚ ಗ್ಯಾರಂಟಿಗಳನ್ನು ಭರವಸೆ ನೀಡಿದ್ದನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತಂದಿದ್ದು, ಎಲ್ಲರಿಗೆ ತಲುಪಿವೆ. ಇದು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರೀರಕ್ಷೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು
ಕನ್ನಡಪ್ರಭ ವಾರ್ತೆ ಅಥಣಿಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ. ಚುನಾವಣೆ ಪೂರ್ವದಲ್ಲಿ ಪಂಚ ಗ್ಯಾರಂಟಿಗಳನ್ನು ಭರವಸೆ ನೀಡಿದ್ದನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತಂದಿದ್ದು, ಎಲ್ಲರಿಗೆ ತಲುಪಿವೆ. ಇದು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರೀರಕ್ಷೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸ್ವಮತಕ್ಷೇತ್ರದ ಸತ್ತಿ ಜಿಲ್ಲಾ ಪಂಚಾಯತಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಪರ ಚುನಾವಣೆಯ ಬಿರಿಸಿನ ಪ್ರಚಾರ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮೋದಿಯವರ ಯಾವ ಕಾರ್ಯಕ್ರಮಗಳು ಜನ ಸಾಮಾನ್ಯರಿಗೆ ತಲುಪಿಲ್ಲ. ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅದಕ್ಕಾಗಿ ಮನಸ್ಸಿಗೆ ಏನೂ ತೊಚುತ್ತದೆ ಹಾಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾಡಿದರು.ಈ ಸಮಯದಲ್ಲಿ ಸದಾಶಿವ ಬುಟಾಳೆ, ಬಸಪ್ಪ ಖೋತ, ಕುಮಾರ ಗಲಗಲಿ, ಮಹಾದೇವ ಗಲಗಲಿ ಮುಂತಾದವರು ಉಪಸ್ಥಿತರಿದ್ದರು..