ಸಾರಾಂಶ
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿಕೊಂಡಿದ್ದು, ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಗೆಲುವಿನ ನಾಗಾಲೋಟ ಮುಂದುವರಿಸಿದೆ.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿಕೊಂಡಿದ್ದು, ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಗೆಲುವಿನ ನಾಗಾಲೋಟ ಮುಂದುವರಿಸಿದೆ. ಕಾಂಗ್ರೆಸ್ ನಾಯಕರು ಹೇಳಿಕೊಂಡು ಬರುತ್ತಿದ್ದ ಪಂಚರಾಜ್ಯ ಚುನಾವಣೆಯ ಸೆಮಿಫೈನಲ್ ಮ್ಯಾಚ್‌ನಲ್ಲಿ ನಾವು ಭರ್ಜರಿಯಾಗಿ ಗೆಲುವು ದಾಖಲಿಸಿದ್ದೇವೆ. ಇದು ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ಮುನ್ನುಡಿಯಾಗಿದೆ ಎಂದರು.
ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ರಾಜ್ಯದಲ್ಲಿ ಕಾಂಗ್ರೆಸಿನ ಬಿಟ್ಟಿಭಾಗ್ಯಗಳ ಆಸೆಯನ್ನು ಬದಿಗೊತ್ತಿ ಅಲ್ಲಿನ ಜನರು ಬಿಜೆಪಿ ಕೈ ಹಿಡಿದಿದ್ದಾರೆ. ಈ ಮೊದಲು ಕಾಂಗ್ರೆಸ್ ಅಧಿಕಾರದಲ್ಲಿದ್ದ ಎರಡು ದೊಡ್ಡ ರಾಜ್ಯಗಳನ್ನು ಕಳೆದುಕೊಂಡು ಹೀನಾಯ ಸ್ಥಿತಿಗೆ ತಲುಪಿದೆ ಎಂದರು.ಕರ್ನಾಟಕದ ಕಾಂಗ್ರೆಸಿನ ಗ್ಯಾರಂಟಿ ಯೋಜನೆಗಳು ತೆಲಂಗಾಣದಲ್ಲಿ ಕೊಂಚ ಪರಿಣಾಮ ಬೀರಿವೆ. ಆದರೂ ತೆಲಂಗಾಣದಲ್ಲಿ ಬಿಜೆಪಿ ಒಂದು ಸ್ಥಾನದಿಂದ ಹತ್ತು ಸ್ಥಾನಕ್ಕೆ ಏರಿಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ತೆಲಂಗಾಣದಲ್ಲಿಯೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.