ಜಿಲ್ಲೆಯಲ್ಲಿ ಕಬ್ಬಿನ ದರ ನಿಗದಿಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ರೈತರು ಹಾಗೂ ಕಾರ್ಖಾನೆಗಳ ನಡುವೆ ನಡೆದ ಎರಡನೇ ಸುತ್ತಿನ ಸಭೆಯಲ್ಲಿ, ಮುಂದಿನ ದಿನಗಳಲ್ಲಿ ಮತ್ತೆ ಚರ್ಚೆ ನಡೆಸಿ ರೈತರ ಬೇಡಿಕೆಗಳಿಗೆ ಅನುಸಾರವಾಗಿ ಸೂಕ್ತ ತೀರ್ಮಾನಕ್ಕೆ ಬರಲು ಕಾರ್ಖಾನೆ ಗಳಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಗಡುವು ನೀಡಿದ್ದರು.
ಕನ್ನಡಪ್ರಭ ವಾರ್ತೆ ಕಲಬುರಗಿ ಜಿಲ್ಲೆಯಲ್ಲಿ ಕಬ್ಬಿನ ದರ ನಿಗದಿಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ರೈತರು ಹಾಗೂ ಕಾರ್ಖಾನೆಗಳ ನಡುವೆ ನಡೆದ ಎರಡನೇ ಸುತ್ತಿನ ಸಭೆಯಲ್ಲಿ, ಮುಂದಿನ ದಿನಗಳಲ್ಲಿ ಮತ್ತೆ ಚರ್ಚೆ ನಡೆಸಿ ರೈತರ ಬೇಡಿಕೆಗಳಿಗೆ ಅನುಸಾರವಾಗಿ ಸೂಕ್ತ ತೀರ್ಮಾನಕ್ಕೆ ಬರಲು ಕಾರ್ಖಾನೆ ಗಳಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಗಡುವು ನೀಡಿದ್ದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತ ಸಂಘಟನೆಗಳ ಮುಖಂಡರು ಹಾಗೂ ಜಿಲ್ಲೆಯಲ್ಲಿರುವ ಐದೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸುದೀರ್ಘವಾಗಿ ಸಭೆಯಲ್ಲಿ ಚರ್ಚೆ ನಡೆಸಿ ಮಾತನಾಡಿದ ಅವರು, ಕೆಲವೊಂದು ಕಡೆಗಳಲ್ಲಿ ಒಣಗುತ್ತಿರುವುದಕ್ಕೆ ಬೇರೆ ಪರ್ಯಾಯ ಮಾರ್ಗವನ್ನು ಹುಡುಕೋಣ, ಇತರೆ ಸುತ್ತಮುತ್ತಲಿನ ಕಾರ್ಖಾನೆಗಳಾಗಿರಲಿ ಈ ಕುರಿತು ಎಲ್ಲರ ಜತೆ ವಿಚಾರ ವಿನಿಮಯ ಮಾಡಿ, ರೈತರ ಬೇಡಿಕೆಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರೋಣ ಎಂದು ತಿಳಿಸಿದರು. ಸಭೆಯಲ್ಲಿ ರೈತರ ಪರವಾಗಿ ಮಾತನಾಡಿದ ಜಿಲ್ಲಾಧಿಕಾರಿಗಳು ಪ್ರತಿ ಟನ್ ಕಬ್ಬಿಗೆ ಕನಿಷ್ಠ 3,600 ರೂಪಾಯಿ ಬೆಲೆ ನೀಡಬೇಕು ಎಂದು ಪಟ್ಟುಹಿಡಿದರು. ಆದರೆ, ಮಾರುಕಟ್ಟೆ ಪರಿಸ್ಥಿತಿ ಹಾಗೂ ರಿಕವರಿ ವ್ಯತ್ಯಾಸದ ಲೆಕ್ಕಾಚಾರಗಳನ್ನು ಮುಂದಿಟ್ಟ ಕಾರ್ಖಾನೆ ಆಡಳಿತ ಮಂಡಳಿಯವರು, 3,600 ರೂಪಾಯಿ ನೀಡುವುದು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. 1% ರಿಕವರಿ ವ್ಯತ್ಯಾಸದನ್ವಯ 3,200 ರೂಪಾಯಿಗಿಂತ ಹೆಚ್ಚು ಬೆಲೆ ನೀಡುವುದು ಅಸಾಧ್ಯವೆಂದು ಕಾರ್ಖಾನೆ ರೈತರು ತಮ್ಮ ಬೇಡಿಕೆಯಿಂದ ಹಿಂದೆಹೋಗಲು ಒಪ್ಪದೆ, ಹಿಂದಿನ ಸಭೆಯ ಬೇಡಿಕೆಯಂತೆ ಕನಿಷ್ಠ ಬೆಲೆಯ ವಿಚಾರದಲ್ಲಿ ಬಿಗಿಪಟ್ಟು ಮುಂದುವರೆಸಿದರು. ಕಾರ್ಖಾನೆ ಆರಂಭವಾಗದಿದ್ದರೆ ನೀರು ಹಾಗೂ ಇಲಾಖೆಯ ಸೌಲಭ್ಯಗಳು ಸಿಗುವುದಿಲ್ಲ ಎಂಬ ವಾದ-ಪ್ರತಿವಾದಗಳು ಸಭೆಯಲ್ಲಿ ಕೇಳಿಬಂದವು.
*ಮೊದಲ ಸಭೆ ನಿರ್ಧಾರ: ಆಳಂದ ,ಅಫಜಲಪೂರ, ಜೇವರ್ಗಿ ಭಾಗಗಳಲ್ಲಿ ನೀರಿನ ಅಭಾವ ಇರುವುದರಿಂದ ಕಬ್ಬಿನ ಬೆಳೆ ಒಣಗುತ್ತಿದ್ದು ಕಾರಣ ಕೂಡಲೇ ಕಾರ್ಖಾನೆಗಳನ್ನು ಪ್ರಾರಂಭಿಸುವುದಕ್ಕೆ ಆ ಭಾಗದ ರೈತರು ಲಿಖಿತವಾವ ಮನವಿಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲಾಧಿಕಾರಿ ಇಕ್ರಂ ಶರೀಫ್ ನೇತೃತ್ವದಲ್ಲಿ ರೈತ ಸಂಘಟನೆಗಳ ಮುಖಂಡರು ಹಾಗೂ ಜಿಲ್ಲೆಯಲ್ಲಿರುವ ಐದೂ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಸಂಜೆ 5ರಿಂದ ರಾತ್ರಿ 10ರ ತನಕ ಸುದೀರ್ಘವಾಗಿ ಸಭೆ ನಡೆಯಿತು ಈ ಸಭೆಯಲ್ಲಿ ರೈತ ಮುಖಂಡರು, ಕಾರ್ಖಾನೆ ಮಾಲೀಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ 3,100 ರು. ನಿಂದ ಆರಂಭವಾದ ಕಬ್ಬಿನ ದರ ಚರ್ಚೆಯು ಅಂತಿಮವಾಗಿ 3,150 ರು. ಗಳಿಗೆ ನಿಂತಿತ್ತು. ಆದರೆ ಬೆಳಗಾವಿ ಭಾಗದಲ್ಲಿ ಅಂತಿಮವಾಗುವವರೆಗೆ ತಾವು ಒಪ್ಪುವುದಿಲ್ಲ ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸೋಣ ಎಂದು ರೈತರು ತಿಳಿಸಿದ್ದರು.ಸಭೆಯಲ್ಲಿ ಜಿಪಂ ಸಿಇಓ ರಾಹುಲ ಸಂಕನೂರ, ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ ಶಾಲು,ಜಿಪಂ ಸಿಇಓ ರಾಹುಲ್ ಸಂಕನೂರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾದ ರಿತಿಕಾ, ಆಹಾರ- ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಮಾರುತಿ ಬ್ಯಾಕೋಡ್, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲೆಯ ಎಲ್ಲಾ ಕಾರ್ಖಾನೆ ಪ್ರತಿನಿಧಿಗಳು, ಕಬ್ಬು ಬೆಳೆಗಾರರ ಸಂಘದ ರೈತ ಮುಖಂಡರುಗಳು ಉಪಸ್ಥಿತರಿದ್ದರು.