ಚಿಕ್ಕಮಗಳೂರುಶಾಲಾ-ಕಾಲೇಜು ಜೂನ್‌ನಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲು ಅಗತ್ಯವಿರುವ ಮಾರ್ಗದಲ್ಲಿ ಹೆಚ್ಚಿನ ಬಸ್ ಸಂಚಾರಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಬೇಕು. ಬಸ್ ಸಮಸ್ಯೆಯಿಂದ ಸಾರ್ವಜನಿಕರು ಶಕ್ತಿ ಯೋಜನೆ ದೂಷಿಸುವಂತಾಗಬಾರದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ನಿರ್ದೇಶಿಸಿದ್ದಾರೆ.
- ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಶಾಲಾ-ಕಾಲೇಜು ಜೂನ್‌ನಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲು ಅಗತ್ಯವಿರುವ ಮಾರ್ಗದಲ್ಲಿ ಹೆಚ್ಚಿನ ಬಸ್ ಸಂಚಾರಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಬೇಕು. ಬಸ್ ಸಮಸ್ಯೆಯಿಂದ ಸಾರ್ವಜನಿಕರು ಶಕ್ತಿ ಯೋಜನೆ ದೂಷಿಸುವಂತಾಗಬಾರದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ನಿರ್ದೇಶಿಸಿದ್ದಾರೆ.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಶೇ.99ರಷ್ಟು ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರಕಿದೆ. ಒಂದೆರಡು ಪ್ರಕರಣಗಳನ್ನು ಹಿಡಿದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು ಮೊದಲು ಫಲಾನುಭವಿಗಳ ಪಟ್ಟಿ ಪರಿಶೀಲಿಸಬೇಕು. ಯೋಜನೆಗಳ ಲಾಭ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ವಿನಾಕಾರಣ ಯೋಜನೆಯನ್ನು ದೂಷಿಸಬಾರದು ಎಂದರು.ಜೂನ್ ನಿಂದ ಶಾಲಾ-ಕಾಲೇಜುಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸಂಚರಿಸಲು ಯಾವುದೇ ಸಮಸ್ಯೆ ಉಂಟಾಗದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ನಿಗದಿತ ಸಮಯದಲ್ಲಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಕೆಲವು ಗ್ರಾಮೀಣ ಭಾಗದ ಸರ್ಕಾರಿ ಬಸ್‌ಗಳು ಕೆಟ್ಟು ನಿಲ್ಲುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಕೆಲವು ಕಡೆ ಮಹಿಳೆಯರು ತಂಗುದಾಣಗಳ ಬಳಿ ಇದ್ದರೂ ಬಸ್ ನಿಲ್ಲಿಸದೆ ವಾಹನ ತೆರಳುತ್ತಿರುವ ದೂರು ಕೇಳಿ ಬರುತ್ತಿದೆ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ ಕುಟುಂಬಸ್ಥರು ಆತಂಕಪಡುವ ಅಗತ್ಯವಿಲ್ಲ. ಮೇ- ಜೂನ್ ತಿಂಗಳ ಪಡಿತರ ಜೂನ್ ತಿಂಗಳಲ್ಲಿ ಒಟ್ಟಿಗೆ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಎನ್.ಮಂಜುನಾಥ್, ಸಮೀವುಲ್ಲಾ, ಎಚ್.ಎಸ್. ಕೃಷ್ಣೇಗೌಡ, ಚಂದ್ರಮೌಳಿ, ಹೇಮಾವತಿ, ಜಿ.ಪಂ ಉಪ ಕಾರ್ಯದರ್ಶಿ ಗೌರವ್‌ಕುಮಾರ್‌ಶೆಟ್ಟಿ ಉಪಸ್ಥಿತರಿದ್ದರು.