ಕುನ್ನೂರಿನ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ

| Published : Aug 16 2024, 12:48 AM IST

ಸಾರಾಂಶ

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದ ವಿವಿಧೆ ಧ್ವಜಾರೋಹಣ ಸಮಾರಂಭ ನಡೆಯಿತು

ಶಿಗ್ಗಾಂವಿ: ತಾಲೂಕಿನ ಕುನ್ನೂರ ಗ್ರಾಮದ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷೆ ಮಂಜುಳಾ ಶಿವಪ್ಪ ಉಪ್ಪಾರ ಧ್ವಜಾರೋಹಣ ನೇರವೆರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಮಹೇಶ ಚಿಕ್ಕವೀರಮಠ, ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು, ವಿಧ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪಿಡಿಒ ಎಸ್.ಎಸ್. ಪಾವೀನ ಸ್ವಾಗತಿಸಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಫಕ್ಕೀರಗೌಡ ಜೇಕಿನಕಟ್ಟಿ ಧ್ಯಜಾರೋಹಣನೆರವೇರಿಸಿದರು. ಗ್ರಾಪಂ ಪದಾಧಿಕಾರಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.

ಸರಕಾರಿ ಪ್ರೌಢಶಾಲೆಯ ಧ್ವಜಾರೋಹಣವನ್ನು ಎಸ್‌ಡಿಎಂಸಿ ಅಧ್ಯಕ್ಷ ಮೈಲಾರೆಪ್ಪ ಮಮದಾಪೂರ ನೆರವೆರಿಸಿದರು. ಗ್ರಾಪಂ ಅಧ್ಯಕ್ಷೆ ಮಂಜುಳಾ ಉಪ್ಪಾರ, ಉಪಾಧ್ಯಕ್ಷೆ ಶ್ರೀಕಾಂತವ್ವ ಮೊರಬದ, ಮಾಜಿ ಅಧ್ಯಕ್ಷ ಮಹೇಶ ಚಿಕ್ಕವೀರಮಠ, ಶಾಲಾ ಸಮಿತಿ ಸದಸ್ಯರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಎಸ್.ಆರ್. ಲಮಾಣಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಸರಕಾರಿ ಕಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮೌನೇಶ ಬಡಿಗೇರ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕರು ಗ್ರಾಮದ ಮುಖಂಡರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿದ್ದರು.

ಸಹಕಾರಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಸಿದ್ದಪ್ಪ ಹದ್ಲಿ ಧ್ವಜಾರೋಹಣ ನರವೇರಿಸಿದರು. ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿದ್ದರು. ನಿವೃತ್ತ ಶಿಕ್ಷಕ ಜೆ.ಡಿ. ಅಂಗಡಿ ಮಾತನಾಡಿದರು. ಸಂಘದ ಸಿಬ್ಬಂದ್ದಿ ಸುರೇಶ ಬೆಂಡಿಗೇರಿ ಸ್ವಾಗತಿಸಿದರು. ಬಸನಗೌಡ ಪಾಟೀಲ ವಂದಿಸಿದರು.

ಕುನ್ನೂರ(ಪ್ಲಾಟ್) ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಹನುಮಂತಪ್ಪ ಮುದಕಪ್ಪನವರ ಧ್ವಜಾರೋಹಣ ನೆರವೇರಿಸಿದರು. ಎಸ್‌ಡಿಎಂಸಿ ಸಮಿತಿ ಪದಾಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಂಜುನಾಥ ಬಡಿಗೇರ ಸ್ವಾಗತಿಸಿದರು.