ಮೇಟಗಳ್ಳಿ ಜೆಎಸ್ಎಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

| Published : Aug 16 2024, 12:45 AM IST

ಮೇಟಗಳ್ಳಿ ಜೆಎಸ್ಎಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು.

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಮೇಟಗಳ್ಳಿಯ ಜೆಎಸ್ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಸಿಆರ್ ಪಿಎಫ್ ನಿವೃತ್ತ ಹೆಡ್ ಕಾನ್ಸ್ ಟೇಬಲ್ ಶಾಂತರಾಜು ಮಾತನಾಡಿ, ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಅವರ ತ್ಯಾಗ ಬಲಿದಾನದಿಂದ ದೇಶದ ಜನರೆಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು.

ಶಾಲಾ ಮುಖ್ಯೋಪಾಧ್ಯಾಯ ಎನ್.ಪಿ. ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಡಿ. ರೋಹನ್ ನಾಯಕ್, ಪಿ. ಸೌಮ್ಯ ನಿರೂಪಿಸಿದರು. ಕೆ.ಎಸ್. ಹರ್ಷಿಕಾ ಸ್ವಾಗತಿಸಿದರು. ಮೇರಿ ರೋಸಲಿನ್ ವಂದಿಸಿದರು.