ಕನ್ನಡಪ್ರಭ ವಾರ್ತೆ ಬಾಗಲಕೋಟೆಹಿಡಕಲ್ (ಘಟಪ್ರಭಾ) ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಆಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ. ಇದರಿಂದ ಹಿಡಕಲ್ ಜಲಾಶಯವು ಶೇ.100ರಷ್ಟು ಭರ್ತಿಯಾಗಿದ್ದು, ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹಿಡಕಲ್ (ಘಟಪ್ರಭಾ) ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಆಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ. ಇದರಿಂದ ಹಿಡಕಲ್ ಜಲಾಶಯವು ಶೇ.100ರಷ್ಟು ಭರ್ತಿಯಾಗಿದ್ದು, ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ.

ಜಲಾಶಯದ ಗರಿಷ್ಟ ಮಟ್ಟ 2175.00 ಅಡಿಗಳಿದ್ದು, ಆಗಸ್ಟ 18ರಂದು 8.30ಕ್ಕೆ ಜಲಾಶಯದ ಮಟ್ಟದ 2174.86 ಅಡಿಗಳಷ್ಟಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ 8523 ಕ್ಯುಸೆಕ್‌ ಇರುತ್ತದೆ. ಘಟಪ್ರಭಾ ನದಿಗೆ ಆಗಸ್ಟ 18 ರಂದು ಸಂಜೆ 4 ಗಂಟೆಗೆ ಕ್ರಸ್ಟ್ ಗೇಟುಗಳ ಮೂಲಕ 5,000 ಕ್ಯುಸೆಕ್‌ ವರೆಗೆ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುವುದು ಎಂದು ಹಾಗೂ ಜಲಾಶಯದ ಒಳಹರಿವು ಹೆಚ್ಚಾದಂತೆ ಮತ್ತೆ 5 ಸಾವಿರ ಕ್ಯುಸೆಕ್‌ ವರೆಗೆ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುವುದು ಎಂದು ಜಲಾಶಯದ ಅಧಿಕಾರಿಗಳು ತಿಳಿಸಿರುತ್ತಾರೆ. ಆದ್ದರಿಂದ ಘಟಪ್ರಭಾ ನದಿಯ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಗ್ರಾಮಸ್ಥರು ತಮ್ಮ ಜಾನುವಾರುಗಳ ಸಮೇತ ನದಿಯ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.