ಬಾಗಲಕೋಟೆ: ಕೃಷ್ಣಾ ಹಾಗೂ ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದೆ.

ಪ್ರಸ್ತುತ ಹಿಪ್ಪರಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 1,31,940 ಕ್ಯೂಸೆಕ್‌ ಇರುತ್ತದೆ. ಹಾಗೂ ಘಟಪ್ರಭಾ ನದಿಗೆ ಹಿರಣ್ಯಕೇಶಿ, ಮಾರ್ಕಂಡಯ್ಯ, ಬಳ್ಳರನಾಲಾ ಉಪನದಿಗಳಿಂದ 13,150 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಆದ್ದರಿಂದ ಕೃಷ್ಣಾ ಮತ್ತು ಘಟಪ್ರಭಾ ನದಿಯ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಗ್ರಾಮಸ್ಥರು ತಮ್ಮ ಜಾನುವಾರುಗಳ ಸಮೇತ ನದಿಯ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.