ನದಿಗಳ ಹರಿವು ಯಥಾಸ್ಥಿತಿ: ಇನ್ನೂ 7 ಸೇತುವೆ ಜಲಾವೃತ

| Published : Aug 31 2024, 01:34 AM IST

ಸಾರಾಂಶ

ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದರು. ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಶುಕ್ರವಾರ ವೇದಗಂಗಾ ಯಥಾಸ್ಥಿತಿ ಕಾಯ್ದುಕೊಂಡಿದೆ.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದರು. ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಶುಕ್ರವಾರ ವೇದಗಂಗಾ ಯಥಾಸ್ಥಿತಿ ಕಾಯ್ದುಕೊಂಡಿದೆ.

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ ಶುಕ್ರವಾರ 1,23,173 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಇದರಲ್ಲಿ ಸುಳಕುಡ ಬ್ಯಾರೇಜ್‌ನಿಂದ ದೂದಗಂಗಾ ನದಿಗೆ 25,340 ಕ್ಯುಸೆಕ್ ಮತ್ತು ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 97,833 ಕ್ಯುಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿದ್ದು, ಗುರುವಾರಕ್ಕಿಂತ ನದಿ ಹರಿವಿನಲ್ಲಿ ಇಳಿಮುಖ ಕಂಡಿದೆ.

ವೇದಗಂಗಾ ನದಿಯ ಭೋಜವಾಡಿ-ಶಿವಾಪುರವಾಡಿ, ಬಾರವಾಡ-ಕುನ್ನೂರ ಸಿದ್ನಾಳ-ಅಕ್ಕೋಳ ಮತ್ತು ಜತ್ರಾಟ-ಭಿವಸಿ, ದೂದಗಂಗಾ ನದಿಯ ಕಾರದಗಾ-ಭೋಜ ಮತ್ತು ಮಲಿಕವಾಡ-ದತವಾಡ ಹಾಗೂ ಕೃಷ್ಣಾ ನದಿಯ ಮಾಂಜರಿ-ಸವದತ್ತಿ ಬ್ಯಾರೇಜ್‌ಗಳು ಜಲಾವೃತಗೊಂಡಿವೆ. ಶನಿವಾರದ ವೇಳೆಗೆ ನೀರಿನ ಪ್ರಮಾಣ ಇನ್ನುಕಡಿಮೆಯಾಗಲಿದೆ. ಪ್ರವಾಹದ ಆತಂಕವಿಲ್ಲ ಎಂದು ತಹಸೀಲ್ದಾರ ಚಿದಂಬರ ಕುಲಕರ್ಣಿ ತಿಳಿಸಿದ್ದಾರೆ.