ವೇಣೂರಿನಲ್ಲಿ ಬಾಹುಬಲಿಗೆ ಕಾಪ್ಟರ್ ಮೂಲಕ ಪುಷ್ಪವೃಷ್ಟಿ

| Published : Feb 24 2024, 02:31 AM IST

ವೇಣೂರಿನಲ್ಲಿ ಬಾಹುಬಲಿಗೆ ಕಾಪ್ಟರ್ ಮೂಲಕ ಪುಷ್ಪವೃಷ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳ್ತಂಗಡಿಯ ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ 2ನೇ ದಿನವಾದ ಶುಕ್ರವಾರ 108 ಕಲಶಗಳಿಂದ ಮಸ್ತಕಾಭಿಷೇಕ, ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಬೆಳ್ತಂಗಡಿಯ ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ 2ನೇ ದಿನವಾದ ಶುಕ್ರವಾರ 108 ಕಲಶಗಳಿಂದ ಮಸ್ತಕಾಭಿಷೇಕ, ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ನಡೆಯಿತು.

ಮೊದಲಿಗೆ ನಿತ್ಯ ವಿಧಿ ಸಹಿತ ಮೃತ್ತಿಕ ಸಂಗ್ರಹಣ, ಅಂಕುರಾರ್ಪಣೆ, ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷರಾಧನ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ ಸಂಜೆ ಬ್ರಹ್ಮಸ್ಥಂಭದ ಬ್ರಹ್ಮಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಹಾಗೂ ಇನ್ನಿತರ ವೈದಿಕ ಕಾರ್ಯಕ್ರಮಗಳು ನಡೆದವು.ಇದೇ ವೇಳೆ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕತೃಗಳಿಂದ ಮಧ್ಯಾಹ್ನ 1.30ಕ್ಕೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ನಡೆಯಿತು. ಈ ವೇಳೆ ನೆರೆದಿದ್ದ ಸಾವಿರಾರು ಭಕ್ತಾದಿಗಳು ಬಾಹುಬಲಿ ಸ್ವಾಮಿಗೆ ಜೈಕಾರ ಹಾಕಿದರು. ಇಂದಿನ ಕಾರ್ಯಕ್ರಮಗಳು: ಶನಿವಾರ ಮಧ್ಯಾಹ್ನ 3 ಗಂಟೆಗೆ ಯುಗಳ ಮುನಿಗಳ ಆಶೀರ್ವಚನದೊಂದಿಗೆ ಸ್ಪೀಕರ್ ಯು‌.ಟಿ‌. ಖಾದರ್‌ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಶಾಸಕ ಹರೀಶ್ ಪೂಂಜ ಉಪಸ್ಥಿತರಿರಲಿದ್ದಾರೆ.