ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಪ್ರತಿಯೊಬ್ಬ ತಾಯಿಯೂ ಮಕ್ಕಳನ್ನು ಆರೋಗ್ಯವಂತರಾಗಿ ಬೆಳೆಸುವ ಕಡೆ ಹೆಚ್ಚು ಗಮನಹರಿಸಬೇಕು ಎಂಬ ದಿಸೆಯಲ್ಲಿ ಮಹಿಳಾ ದಸರಾ ಪ್ರಯುಕ್ತ ಆರೋಗ್ಯವಂತ ಶಿಶುಗಳ ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್ ತಿಳಿಸಿದರು.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ಹನೂರು ಪಟ್ಟಣದ ತಾಲೂಕು ಆರೋಗ್ಯ ಇಲಾಖೆ ಕಚೇರಿಯಲ್ಲಿ ಮಹಿಳಾ ದಸರಾ ಪ್ರಯುಕ್ತ ಆರೋಗ್ಯವಂತ ಶಿಶುಗಳ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಯಿಯು ಗರ್ಭಾವಸ್ಥೆಯಲ್ಲಿರುವಾಗಲೆ ಉತ್ತಮ ಆರೈಕೆ ಮಾಡಿಕೊಳ್ಳುವುದರಿಂದ ಆರೋಗ್ಯವಂತ ಮಗು ಪಡೆಯಬಹುದು ಸಮಾಜಕ್ಕೆ ಒಬ್ಬ ಆರೋಗ್ಯವಂತ ಪ್ರಜೆಯನ್ನು ಕೊಡುಗೆಯಾಗಿ ನೀಡಬಹುದು. ಈ ನಿಟ್ಟಿನಲ್ಲಿ ಸರ್ಕಾರವು ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಅಂಗನವಾಡಿ ಮೂಲಕ ನೀಡುತ್ತಿದೆ. ಬಹುತೇಕ ಮಹಿಳೆಯರು ಹಿಂಜರಿಕೆಯಿಂದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡದೆ ಸಿಗುವ ಸೌಲಭ್ಯ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಇಂತಹ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಎಂದರಲ್ಲದೆ ಪ್ರತಿಯೊಬ್ಬ ತಾಯಿಯೂ ತಮ್ಮ ಮಗುವಿನ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂಬ ದಿಸೆಯಲ್ಲಿ ಮಹಿಳಾ ದಸರಾ ಪ್ರಯುಕ್ತ ಆರೋಗ್ಯವಂತ ಶಿಶುಗಳ ಸ್ಪರ್ಧೆ ಆಯೋಜನೆ ಮಾಡಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹಿರಿಯ ಪ್ರಾರ್ಥಮಿಕ ಸುರಕ್ಷಣಾ ಅಧಿಕಾರಿ ನಾಗಮ್ಮ ,ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಿಂಬೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಗೌಶಿಯ, ಪೂರ್ಣಿಮಾ ಸೇರಿದಂತೆ ಸಂತೋಷ್ ಬಸವರಾಜ್ ಹಾಜರಿದ್ದರು.