ಬೋಧನೆ ಜತೆಗೆ ಪಠ್ಯೇತರ ಚಟುವಟಿಕೆ ಗಮನಹರಿಸಿ

| Published : Jul 09 2024, 12:57 AM IST

ಸಾರಾಂಶ

ಶಿಕ್ಷಕರಾದವರು ಮಕ್ಕಳಿಗೆ ಪಠ್ಯ ಬೋಧನೆ ಮಾಡುವ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಮಕ್ಕಳನ್ನು ಬೆಳೆಸುವತ್ತ ಗಮನ ಹರಿಸಬೇಕು. ಇದರಿಂದ ವಿದ್ಯಾರ್ಥಿಗಳು ಕ್ರೀಯಾಶೀಲತೆ ಕಲಿತು ಉತ್ತಮವಾದ ವಿದ್ಯಾರ್ಥಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದ್ದಾರೆ.

- ಮರವಂಜಿಯಲ್ಲಿ ಶಾಲಾ ಕೊಠಡಿ, ಗ್ರಂಥಾಲಯ ಉದ್ಘಾಟಿಸಿ ಶಾಸಕ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಶಿಕ್ಷಕರಾದವರು ಮಕ್ಕಳಿಗೆ ಪಠ್ಯ ಬೋಧನೆ ಮಾಡುವ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಮಕ್ಕಳನ್ನು ಬೆಳೆಸುವತ್ತ ಗಮನ ಹರಿಸಬೇಕು. ಇದರಿಂದ ವಿದ್ಯಾರ್ಥಿಗಳು ಕ್ರೀಯಾಶೀಲತೆ ಕಲಿತು ಉತ್ತಮವಾದ ವಿದ್ಯಾರ್ಥಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.

ಸೋಮವಾರ ತಾಲೂಕಿನ ಮರವಂಜಿ ಗ್ರಾಮದಲ್ಲಿ ರಾಜ್ಯಪಾಲರ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ ಮತ್ತು ಪ್ರಧಾನ ಮಂತ್ರಿ ಆದರ್ಶ ಯೋಜನೆಯಲ್ಲಿ ನಿರ್ಮಾಣಗೊಂಡ ನೂತನ ಗ್ರಂಥಾಲಯ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ನೀಡಿ, ಸಮರ್ಥ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಬೆಳಗ್ಗೆ ಶಾಲೆಗೆ ಬರುವ ಮಕ್ಕಳು ನಿಮ್ಮ ಜತೆಯಲ್ಲಿ ಸಂಜೆಯವರೆಗೂ ಇರುತ್ತಾರೆ. ಅವರ ಎಲ್ಲಾ ರೀತಿಯ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬರುತ್ತವೆ. ಆದ್ದರಿದ ಮಕ್ಕಳಿಗೆ ಯಾವುದರ ಬಗ್ಗೆ ಆಸಕ್ತಿ ಇದೆ ಎಂಬುದನ್ನು ತಿಳಿದು ಅಂತಹ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಹೇಳಿದಂತೆ ಗ್ರಾಮದಲ್ಲಿ ದೇವಸ್ಥಾನಗಳ ಬದಲಿಗೆ ಗ್ರಂಥಾಲಯಗಳು ಶಾಲೆಗಳು ಇದ್ದರೆ ಅಂತಹ ಗ್ರಾಮ ದೇಶಕ್ಕೆ ಮಾದರಿಯಾಗುತ್ತದೆ ಎಂದರು.

ಸಮಾರಂಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಗೀತಮ್ಮ, ಉಪಾಧ್ಯಕ್ಷ ಪುಟ್ಟಮ್ಮ, ಸದಸ್ಯರಾದ ಆರ್. ರುದ್ರನಾಯ್ಕ್, ಕಮಲಮ್ಮ, ಜೀವನ್ ಕುಮಾರ್, ಅಭಿಲಾಷ್, ಗ್ರಾ.ಪಂ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

----8ಕೆಸಿಎನ್ಜಿ4

ಮರವಂಜಿ ಸರ್ಕಾರಿ ಶಾಲೆಯ ಹೆಚ್ಚುವರಿ ಕೊಠಡಿಗಳನ್ನು ಶಾಸಕ ಬಸವರಾಜ ವಿ.ಶಿವಗಂಗಾ ಉದ್ಘಾಟಿಸಿದರು.