ರೈತರಿಗೆ ತಾತ್ಕಾಲಿಕ ಪರಿಹಾರ,ಮಧ್ಯಂತರ ಪರಿಹಾರ, ಸೇರಿದಂತೆ ಜಿಲ್ಲೆಯಲ್ಲಿ ವಿಮೆ ಪಾವತಿಸಿರುವ ರೈತಗೆ ಪ್ರಾಮಾಣಿಕವಾಗಿ ಪರಿಹಾರ ಹಣ ದೊರಕುವಂತೆ ನಿಗಾವಹಿಸಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಗ್ರಾಮಗಳಿಂದ ಹೊರಭಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸಿಂಗಲ್ ಫೇಸ್‌ನಲ್ಲಿ ವಿದ್ಯುತ್ ನೀಡಿ ಎಂದು ನಿರ್ದೇಶನ ನೀಡಿದರು. ಪ್ರಕೃತಿದತ್ತವಾಗಿ ದೊರಕುವ ಸೋಲಾರ್ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಲು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಅತೀ ಶ್ರೀಘ್ರವಾಗಿ ಪೂರ್ಣಗೊಳಿಸಿ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಗಮನಹರಿಸುವಂತೆ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ.ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ತಾತ್ಕಾಲಿಕ ಪರಿಹಾರ,ಮಧ್ಯಂತರ ಪರಿಹಾರ, ಸೇರಿದಂತೆ ಜಿಲ್ಲೆಯಲ್ಲಿ ವಿಮೆ ಪಾವತಿಸಿರುವ ರೈತಗೆ ಪ್ರಾಮಾಣಿಕವಾಗಿ ಪರಿಹಾರ ಹಣ ದೊರಕುವಂತೆ ನಿಗಾವಹಿಸಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಗ್ರಾಮಗಳಿಂದ ಹೊರಭಾಗದಲ್ಲಿ ಮನೆಗಳನ್ನು ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸಿಂಗಲ್ ಫೇಸ್‌ನಲ್ಲಿ ವಿದ್ಯುತ್ ನೀಡಿ ಎಂದು ನಿರ್ದೇಶನ ನೀಡಿದರು. ಪ್ರಕೃತಿದತ್ತವಾಗಿ ದೊರಕುವ ಸೋಲಾರ್ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಲು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಅತೀ ಶ್ರೀಘ್ರವಾಗಿ ಪೂರ್ಣಗೊಳಿಸಿ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಅನುಕೂಲವಾಗುವಂತೆ ರಾತ್ರಿ ಪಾಳಿಯಲ್ಲಿ ಜನರಲ್ ಮೆಡಿಸನ್ ವೈದ್ಯರನ್ನು ನೇಮಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳಿಗೆ ಸೂಚಿಸಿದರಲ್ಲದೆ ತಾಲೂಕು ಕೇಂದ್ರದಲ್ಲಿರುವ ನುರಿತ ವೈದ್ಯರು ವಾರದಲ್ಲಿ ಒಂದು ದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಬಡ ಜನರಿಗೆ ಆರೋಗ್ಯ ಸೇವೆ ಸಲ್ಲಿಸ ಕ್ರಮಕೈಗೊಳ್ಳಲು ಸೂಚಿಸಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ೨-೩ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಆರಂಭವಾಗಬೇಕು ಈ ನಿಟ್ಟಿನಲ್ಲಿ ಭಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ-೭೩ ಬಾಣಾವರ ಹುಳಿಯಾರು ರಸ್ತೆ ಕಾಮಗಾರಿ ಪೂರ್ಣವಾಗದೆ ಅಪಘಾತಗಳು ಹೆಚ್ಚು ನಡೆಯುತ್ತಿವೆ ಶ್ರೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲು ಅಗತ್ಯ ಕ್ರಮವಹಿಸುವಂತೆ ಅಗತ್ಯ ಕ್ರಮವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಯವರ ನೂತನ ಕಚೇರಿ ಸಂಕಿರ್ಣ, ಜಿಲ್ಲೆಯಲ್ಲಿ ನೆನೆಗುದ್ದಿಗೆ ಬಿದ್ದಿರುವ ವಿಮಾನ ನಿಲ್ದಾಣ, ಐಐಟಿ ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತಿಸಲಾಗಿದ್ದು ಎಲ್ಲಾ ಶಾಸಕರು ಸಹಕಾರ ನೀಡುವಂತೆ ಸಚಿವರು ತಿಳಿಸಿದರು.

ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಮಾತನಾಡಿ, ಕೆರೆಗಳಲ್ಲಿ ನೀರಿಲ್ಲದೆ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಿದೆ. ಇಂತಹ ಸನ್ನಿವೇಶದಲ್ಲಿ ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ಸಂಪರ್ಕ ಕಡಿತಗೊಳಿಸಲಾಗಿದೆ. ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶಾಸಕರಾದ ಸಿ.ಎನ್. ಬಾಲಕೃಷ್ಣ ಅವರು ಮಾತನಾಡಿ, ಬೊರವೇಲ್ ಇರುವವರಿಗೆ ಮೇವಿನ ಕಿರು ಪೊಟ್ಟಣಗಳನ್ನು ವಿತರಣೆ ಆಗಬೇಕು ಎಂದು ತಿಳಿಸಿದರು. ಎಬಿಆರ್‌ಕೆ ಅನಧಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿಗಳನ್ನು ಖರೀಧಿಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕುಡಿಯುವ ನೀರಿನ ಬವಣೆ ಹೆಚ್ಚಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳವಂತೆ ತಿಳಿಸಿದರು. ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಹಣ ಪಾವತಿಸಲು ಸ್ವರೂಪ್ ಪ್ರಕಾಶ್ ಅವರು ಮಾತನಾಡಿ ಕಂದಲಿಯಲ್ಲಿ ವಿಸ್ತರಣಾ ಕೇಂದ್ರ ಮುಚ್ಚುತ್ತಾರೆ ಎಂಬ ಮಾಹಿತಿ ಇದೆ ಅದನ್ನು ಜನರ ಅನುಕೂಲಕ್ಕಾಗಿ ಅಲ್ಲಿಯೇ ಉಳಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಬೂವನಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲು ಮನವಿ ಮಾಡಿದರು.ಹಾಸನ ಮಹಾನಗರ ಪಾಲಿಕೆಗೆ ಹೊಸದಾಗಿ ಸೇರ್ಪಡೆಯಾಗಿರುವ ಗ್ರಾಮಗಳ ಹೆಚ್ಚು ಒತ್ತು ನೀಡಿ ಕ್ರಿಯಾ ಯೋಜನೆಯನ್ನು ತಯಾರಿಸಲು ಸೂಚಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.ಶಾಸಕರಾದ ಸಿಮೆಂಟ್ ಮಂಜು ಹಾಗೂ ಹೆಚ್.ಕೆ.ಸುರೇಶ್ ಅವರು ಮಾತನಾಡಿ, ಹೊಸ ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ರಾಜ್ಯ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರ್ ನಾಥ್ ಅವರು ಸದರಿ ಸಭೆಯಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರೀಶಿಲಿಸಿದರು.ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಮಾತನಾಡಿ ಜಾನುವಾರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮರುಪರಿಶೀಲನೆ ಮಾಡಿ ತಾಲ್ಲೂಕುವಾರು ವರದಿ ಸಿದ್ಧಪಡಿಸಿ ನೀಡುವಂತೆ ಸೂಚಿಸಿದರಲ್ಲದೆ, ಜಿಲ್ಲೆಗೆ ೧.೨೫ ಲಕ್ಷ ಮೇವಿನ ಕಿರು ಪೊಟ್ಟಣವನ್ನು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ರಂಜಿತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಇದ್ದರು.==============

ಬಾಕ್ಸ್‌

ಶಾಸಕರಾದ ಎ.ಮಂಜು ಅವರು ಹಿಮ್ಮತ್ ಸಿಂಕಾ ಕೈಗಾರಿಕಾ ಪ್ರಾರಂಭಿಸುವ ಸಂದರ್ಭದಲ್ಲಿ ಮಾಡಿಕೊಂಡಿರುವ ಒಪ್ಪಂದದಂತೆ ವಿದ್ಯುತ್ ಅನ್ನು ಸ್ವಂತವಾಗಿ ಉತ್ಪಾದನೆ ಮಾಡಿಕೊಳ್ಳಬೇಕು. ಆದರೆ ಅವರು ಅರಕಲಗೂಡಿಗೆ ಸರಬರಾಜಗುವ ವಿದ್ಯುತ್ ಅನ್ನು ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಅರಕಲಗೂಡಿನ ಜನತೆಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕಿದೆ ಎಂದರು.