ಸಾರಾಂಶ
ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕಿಸಬೇಕೆಂಬ ಉದ್ದೇಶದಿಂದ ಸರ್ಕಾರಿ ಉದ್ಯೋಗದಿಂದ ಸ್ವಯಂ ನಿವೃತ್ತಿಯಾಗಿ ಹೊಂದಿ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಶಿಕ್ಷಣ ನೀಡುಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಪ್ರಶಿಕ್ಷಣಾರ್ಥಿಗಳು ಕೇವಲ ಅಂಕಗಳಿಸುವುದಕ್ಕೆ ಮಾತ್ರ ಸೀಮಿತಗೊಳ್ಳದೆ ವೃತ್ತಿಯಲ್ಲಿ ಕೌಶಲ್ಯತೆ ಬೆಳೆಸಿಕೊಳ್ಳುವತ್ತ ಗಮನ ಹರಿಸಬೇಕು ಎಂದು ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ ಕರೆ ನೀಡಿದರು.ಪಟ್ಟಣದ ಭಗವಾನ್ ಬುದ್ಧ ಬಿ.ಇ.ಡಿ ಕಾಲೇಜು ಆವರಣದಲ್ಲಿ ನಡೆದ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ತರಗತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯದೊಂದಿಗೆ ಶಿಸ್ತು, ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಸುಲಭವಾಗಿ ಗುರಿ ಸಾಧಿಸಬಹುದು ಎಂದರು.
ಭಗವಾನ್ ಬುದ್ಧ ಮಹಾವಿದ್ಯಾಲಯ ಸಂಸ್ಥಾಪಕ ಅಧ್ಯಕ್ಷ ಡಾ.ಯಮದೂರು ಸಿದ್ದರಾಜು ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕಿಸಬೇಕೆಂಬ ಉದ್ದೇಶದಿಂದ ಸರ್ಕಾರಿ ಉದ್ಯೋಗದಿಂದ ಸ್ವಯಂ ನಿವೃತ್ತಿಯಾಗಿ ಹೊಂದಿ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಶಿಕ್ಷಣ ನೀಡುಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖ. ಪ್ರಶಿಕ್ಷಣಾರ್ಥಿಗಳು ಮುಂದಿನ ಶಿಕ್ಷಕ ವೃತ್ತಿ ಪ್ರಾರಂಭಿಸುವುದರಿಂದ ಶಿಕ್ಷಣ ಕಲಿಸುವ ಪೂರಕ ಅಧ್ಯಯನವನ್ನು ಶ್ರದ್ದೆಯಿಂದ ಮಾಡಬೇಕು ಎಂದರು.
ಕೇವಲ ಅಂಕಗಳ ಆಧಾರದ ಮೇಲೆ ಉದ್ಯೋಗ ನೀಡುವ ಕಾಲ ಮುಗಿದಿದೆ. ಜ್ಞಾನ ಪ್ರಾವೀಣ್ಯತೆ ಆಧರಿಸಿ ಉದ್ಯೋಗ ನೀಡುವುದರಿಂದ ಎಲ್ಲಾ ವಿಷಯಗಳಿಗೂ ಗಮನಹರಿಸಬೇಕೆಂದು ಹೇಳಿದರು.ಇದೇ ವೇಳೆ ಪ್ರೊ.ಪಿ.ವೆಂಕಟರಾಮಯ್ಯ, ಪ್ರೊ.ಗಂಗಾಧರ್, ಬಿಸಿಎಂ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ಎಂ.ಆರ್.ನಾಗರಾಜು ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಚೇತನ್ ಕುಮಾರ್, ಪ್ರಾಂಶುಪಾಲ ಡಾ.ಬಾಲಸುಬ್ರಹ್ಮಣ್ಯ, ನಿಲಯ ಮೇಲ್ವಿಚಾರಕ ವಿನೋದ್ ಕುಮಾರ್, ಪದವಿ ಕಾಲೇಜಿನ ಪ್ರಾಂಶುಪಾಲ ಶಿವಶಂಕರ್ ಸೇರಿದಂತೆ ಇತರರು ಇದ್ದರು.;Resize=(128,128))
;Resize=(128,128))