ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ

| Published : May 05 2024, 02:05 AM IST

ಸಾರಾಂಶ

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್‌ ಪ್ರಾರಂಭಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿರಾ

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್‌ ಪ್ರಾರಂಭಿಸಲಾಯಿತು. ತಹಸೀಲ್ದಾರ್ ಡಾ. ದತ್ತಾತ್ರೇಯ ಜೆ.ಜಿ. ಮಾತನಾಡಿ, ತಾಲೂಕಿನ ಹುಲಿಕುಂಟೆ ಹೋಬಳಿ ಕುರುಬರರಾಮನಹಳ್ಳಿಯಲ್ಲಿ ಕಳೆದ ತಿಂಗಳು ಒಂದು ಮೇವು ಬ್ಯಾಂಕ್‌ನ್ನು ಪ್ರಾರಂಭಿಸಲಾಗಿದ್ದು, ರೈತರಿಗೆ ಮೇವು ವಿತರಣೆ ಮಾಡಲಾಗುತ್ತಿದೆ. ಅದೇ ರೀತಿ ಚಿಕ್ಕನಹಳ್ಳಿ ಗ್ರಾಮದಲ್ಲಿ ಪ್ರಾರಂಭಿಸಿರುವ ಮೇವು ಬ್ಯಾಂಕಿನಲ್ಲಿ ಪ್ರತಿ ಕೆಜಿಗೆ 2 ರು.ಗಳಂತೆ ಪ್ರತಿ ಜಾನುವಾರಿಗೆ ಒಂದು ದಿನಕ್ಕೆ 6 ಕೆಜಿಯಂತೆ ಒಂದು ವಾರಕ್ಕೆ ಬೇಕಾಗುವಷ್ಟು ಮೇವನ್ನು ವಿತರಿಸಲಾಗುತ್ತಿದೆ. ಜಾನುವಾರು ಮಾಲೀಕರು ಪಶು ಇಲಾಖೆಯಿಂದ ನೀಡಿರುವ ಮೇವು ವಿತರಣಾ ಕಾರ್ಡ್‌ಗಳನ್ನು ಹಾಜರುಪಡಿಸಿ ಮೇವನ್ನು ಪಡೆಯಬಹುದಾಗಿದೆ ಎಂದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ: ಸಿ.ಎಸ್. ರಮೇಶ, ಉಪ ತಹಸೀಲ್ದಾರ್ ನರಸಿಂಹಮೂರ್ತಿ ಹಾಗೂ ಡಾ. ವಿನೋದ್, ಡಾ. ವಸಂತ್ ಕುಮಾರ್ ಹಾಜರಿದ್ದರು.