ಜಾನಪದ ಕಲೆ ಜೀವನ ಪ್ರತಿ ಹಂತದಲ್ಲೂ ಬೆರೆತು ಉಸಿರಾಗಿದೆ: ಡಿ.ಪಿ.ಸ್ವಾಮಿ

| Published : Sep 03 2024, 01:39 AM IST

ಜಾನಪದ ಕಲೆ ಜೀವನ ಪ್ರತಿ ಹಂತದಲ್ಲೂ ಬೆರೆತು ಉಸಿರಾಗಿದೆ: ಡಿ.ಪಿ.ಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಆಧುನಿಕ ಜಗತ್ತಿನಲ್ಲಿ ಜಾನಪದ ಕಲೆ ನಶಿಸುತ್ತಿರುವುದು ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಆಧುನಿಕ ಸಂಗೀತದಿಂದಾಗಿ ಜಾನಪದ ಕಲೆ ನಶಿಸುತ್ತಿರುವುದು ನಿಜಕ್ಕೂ ದುರಂತ. ನಮ್ಮ ಈ ಪಾರಂಪರಿಕ ಜಾನಪದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಉಳಿಸುವ ಕೆಲಸವನ್ನು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಾಡಬೇಕು.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಜಾನಪದ ಕಲೆಯು ಜನರ ಜೀವನದಲ್ಲಿ ಪ್ರತಿ ಹಂತದಲ್ಲೂ ಬೆರೆತು ಉಸಿರಾಗಿದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಹೇಳಿದರು.ಪಟ್ಟಣದ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ವಿಶ್ವ ಜಾನಪದ ದಿನಾಚರಣೆ ಹಾಗೂ ಜಾನಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರ ಹುಟ್ಟಿನಿಂದಲೇ ತಮ್ಮ ಕಸಬುಗಳ ಮೂಲಕ ಬಳುವಳಿಯಾಗಿ ಬಂದಿರುವ ಜಾನಪದ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಯುವಸಮೂಹ ಜಾನಪದ ಕಲೆ ರೂಢಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಹಿರಿಯ ಜಾನಪದ ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಜಾನಪದ ಕಲೆ ನಶಿಸುತ್ತಿರುವುದು ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಆಧುನಿಕ ಸಂಗೀತದಿಂದಾಗಿ ಜಾನಪದ ಕಲೆ ನಶಿಸುತ್ತಿರುವುದು ನಿಜಕ್ಕೂ ದುರಂತ. ನಮ್ಮ ಈ ಪಾರಂಪರಿಕ ಜಾನಪದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಉಳಿಸುವ ಕೆಲಸವನ್ನು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.

ಭಗವಾನ್ ಬುದ್ಧ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಯಮದೂರು ಸಿದ್ದರಾಜು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಂಬೂರಿ ಗುರುಬಸವಯ್ಯ, ಪೂರಿಗಾಲಿ ಮಹಾದೇವು, ತಳಗವಾದಿ ಹೊನ್ನಯ್ಯ, ರಂಗ ಕಲಾವಿದೆ ಭಾಗ್ಯಮ್ಮ ಅವರು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಜಾನಪದ ಪರಿಷತ್‌ನ ತಾಲೂಕು ಅಧ್ಯಕ್ಷ ಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಚೇತನ್ ಕುಮಾರ್, ಮುಖಂಡರಾದ ಎಂ.ಎನ್.ಜಯರಾಜು, ಶಿವಲಿಂಗಯ್ಯ, ಪ್ರಾಂಶುಪಾಲ ಸುಬ್ರಹ್ಮಣ್ಯ ಇದ್ದರು.