ಗ್ರಾಮೀಣ ಕಲಾವಿದರಿಂದ ಜಾನಪದ ಇನ್ನೂ ಜೀವಂತವಾಗಿದೆ: ಪ್ರತಾಪಗೌಡ ಪಾಟೀಲ್ ಪ್ರತಿಪಾದನೆ

| Published : Nov 25 2024, 01:00 AM IST

ಗ್ರಾಮೀಣ ಕಲಾವಿದರಿಂದ ಜಾನಪದ ಇನ್ನೂ ಜೀವಂತವಾಗಿದೆ: ಪ್ರತಾಪಗೌಡ ಪಾಟೀಲ್ ಪ್ರತಿಪಾದನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಸ್ಕಿ ಪಟ್ಟಣದ ಗಚ್ಚಿನಮಠದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ಜಂಟಿಯಾಗಿ ಜಾನಪದ ಸಂಭ್ರಮ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಮಸ್ಕಿ

ಗ್ರಾಮೀಣ ಭಾಗದ ಕಲೆ ಮತ್ತು ಕಲಾವಿದರಿಂದ ಮಾತ್ರ ಇವತ್ತು ಜಾನಪದ ಕಲೆ, ಸಂಸ್ಕೃತಿ ಜೀವಂತವಾಗಿ ಉಳಿದುಕೊಂಡಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಗಚ್ಚಿನಮಠದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ಜಂಟಿಯಾಗಿ ಏರ್ಪಡಿಸಿದ್ದ ಜಾನಪದ ಸಂಭ್ರಮ-2024 ಉದ್ಘಾಟಿಸಿ ಮಾತನಾಡಿದ ಅವರು ಜನಪದ ಸಾಹಿತ್ಯ ಶ್ರೀಮಂತ ಸಾಹಿತ್ಯ ವಾಗಿದ, ಗ್ರಾಮೀಣ ಭಾಗದ ಜನರು ಹಳ್ಳಿ ಸೋಗಡಿನಲ್ಲಿ ಹಾಡುವ, ಕುಣಿವ ಮೂಲಕ ಜಾನಪದ ಕಲೆಗೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.

ಟಿವಿ ಹಾಗೂ ಸಾಮಾಜಿಕ ಜಾಲತಾಣಗಳ ಪೈಪೋಟಿ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಸಮಕಲ್ ಗ್ರಾಮದ ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ಗ್ರಾಮೀಣ ಭಾಗದ ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸರ್ಕಾರ ಜಾನಪದ ಕಲೆ ಹೆಚ್ಚಿನ ಅವಕಾಶ ನೀಡುವ ಮೂಲಕ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ಮಾತನಾಡಿ, ಜಾನಪದ ಕಲೆ ಹಾಗೂ ಸಂಸ್ಕೃತಿ ಬಗ್ಗೆ ಪಟ್ಟಣ ಪ್ರದೇಶದಲ್ಲಿ ಹೆಚ್ಚು ಹೆಚ್ಚು ಬೆಳಕು ಚೆಲ್ಲುವ ಮೂಲಕ ಯುವ ಜನಾಂಗಕ್ಕೆ ಜಾನಪದವನ್ನು ಪರಿಚಯಿಸುವ ಕೆಲಸ ನಡೆಯಬೇಕು ಎಂದರು.

ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಸದಸ್ಯ ರಂಗಪ್ಪ, ಮಾಜಿ ಸದಸ್ಯ ನಾರಾಯಣಪ್ಪ ಮಾಡಸಿರವಾರ, ವಿ.ರಾಮಚಂದ್ರಪ್ಪ, ಬಹು ರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ನ ಗೌರವಾಧ್ಯಕ್ಷ ಜಂಬಣ್ಣ ಹಸಮಕಲ್, ಅಧ್ಯಕ್ಷ ಅಮರೇಶ ಹಸಮಕಲ್ ಇತರರು ಇದ್ದರು. ಹೆಜ್ಜೆ ಕುಣಿತ, ಚಿಲಿಪಿಲಿ ಗೊಂಬೆ, ಡೊಳ್ಳು ಕುಣಿತ, ಬುರ್ರಾ ಕಥೆ, ಬಯಲಾಟ, ಜೋಗುಳ ಪದ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದವು.

ಜಾನಪದ ಮೆರವಣಿಗೆಗೆ ಚಾಲನೆ:

ಪಟ್ಟಣದ ಅಶೋಕ ವೃತ್ತದಲ್ಲಿ ಜಾನಪದ ಕಲಾವಿದರ ಮೆರವಣಿಗೆಗೆ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಡೊಳ್ಳು ಭಾರಿಸುವ ಮೂಲಕ ಚಾಲನೆ ನೀಡಿದರು. ಗಚ್ಚಿನಮಠದರೆಗೆ ನಡೆದ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದವು. ಬಹುರೂಪಿ ಚೌಡಯ್ಯ ಹಗಲುವೇಷ ಕಲಾವಿದರ ಟ್ರಸ್ಟ್ ನ ಗೌರವಾಧ್ಯಕ್ಷ ಜಂಬಣ್ಣ ಹಸಮಕಲ್, ಅಧ್ಯಕ್ಷ ಅಮರೇಶ ಹಸಮಕಲ್ ಇತರರು ಇದ್ದರು.