ಸಾರಾಂಶ
ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು.
ಹೊಸಪೇಟೆ: ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ನಗರದ ಚಿತ್ತವಾಡ್ಗಿಯ ಬನಶಂಕರಿ ದೇಗುಲದಲ್ಲಿ ಭಾನುವಾರ ವಾಲ್ಮೀಕಿ ಜಯಂತಿ ಮಹೋತ್ಸವದ ಅಂಗವಾಗಿ ನಡೆದ ಮಹರ್ಷಿ ಭಾವಚಿತ್ರದ ಭವ್ಯ ಮೆರವಣಿಗೆ ಉದ್ಘಾಟಿಸಿ ಮಾತನಾಡಿದರು.ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯ ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವವನ್ನು ರಾಮಾಯಣ ಮಹಾಕಾವ್ಯ ಪರಿಚಯಿಸಿದೆ. ಮಹರ್ಷಿ ವಾಲ್ಮೀಕಿಯವರು ರಾಮಾಯಣ ರಚಿಸಿದ್ದರಿಂದ ವಾಲ್ಮೀಕಿ ರಾಮಾಯಣ ಎಂದು ಪ್ರಸಿದ್ಧಿಯಾಯಿತು ಎಂದರು.
ಹುಡಾ ಅಧ್ಯಕ್ಷ ಎಚ್‌ಎನ್‌ಎಫ್ ಇಮಾಮ್ ನಿಯಾಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ, ತತ್ವಾದರ್ಶಗಳು ನಮ್ಮ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿ ಪ್ರಚಲಿತದಲ್ಲಿವೆ. ಅವರ ತತ್ವಗಳನ್ನು ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.ಮೆರವಣಿಗೆ:
ಬನಶಂಕರಿ ದೇಗುಲದಿಂದ ಶಾದಿ ಮಹಲ್, ಹೊಸೂರ ರಸ್ತೆ ಮಾರ್ಗವಾಗಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಡೆಯಿತು. ವಾಲ್ಮೀಕಿ ಸಮಾಜದ ಧರ್ಮದರ್ಶಿ ಜಂಬಯ್ಯ ನಾಯಕ, ವಾಲ್ಮೀಕಿ ಸಮಾಜದ ಅಧ್ಯಕ್ಷ ಶ್ರೀನಾಥ್ ಗುಜ್ಜಲ್, ಡಿವೈಎಸ್ಪಿ ಮಂಜುನಾಥ ತಳವಾರ್, ಮುಖಂಡರಾದ ವಸಂತ ಜಂಬಾನಹಳ್ಳಿ, ಮಂಜುನಾಥ್, ಅಂಜಿನಪ್ಪ, ಕೊಟ್ರೇಶ್, ಕೆ. ಲಕ್ಷ್ಮಣ, ಹನುಮಂತಪ್ಪ ಮತ್ತಿತರರಿದ್ದರು.ಹೊಸಪೇಟೆಯ ಚಿತ್ತವಾಡ್ಗಿಯಲ್ಲಿ ಭಾನುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದಲ್ಲಿ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ಮಹರ್ಷಿ ಭಾವಚಿತ್ರ ನೀಡಿ ಸನ್ಮಾನಿಸಲಾಯಿತು.