ಸಾರಾಂಶ
ಸರ್ಕಾರದ ಹೊಸ ಸಂಚಾರಿ ನಿಯಮಗಳನ್ನು ದ್ವಿಚಕ್ರ ವಾಹನ ಸವಾರರು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಇಲ್ಲದಿದ್ದರೆ ದಂಡಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಚ್ಚರಿಕೆವಹಿಸಿ ಎಂದು ಸಬ್‌ಇನ್ಸ್‌ಪೆಕ್ಟರ್ ಈಶ್ವರ್ ತಿಳಿಸಿದರು. ಹನೂರಿನಲ್ಲಿ ರಸ್ತೆ ಸಂಚಾರಿ ನಿಯಮ ಮತ್ತು ಹೆಲ್ಮೆಟ್ ಕಡ್ಡಾಯ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಚಾರಿ ನಿಯಮ- ಹೆಲ್ಮೆಟ್ ಜಾಗೃತಿ
ಹನೂರು: ಸರ್ಕಾರದ ಹೊಸ ಸಂಚಾರಿ ನಿಯಮಗಳನ್ನು ದ್ವಿಚಕ್ರ ವಾಹನ ಸವಾರರು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಇಲ್ಲದಿದ್ದರೆ ದಂಡಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಚ್ಚರಿಕೆವಹಿಸಿ ಎಂದು ಸಬ್‌ಇನ್ಸ್‌ಪೆಕ್ಟರ್ ಈಶ್ವರ್ ತಿಳಿಸಿದರು.ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಾಪುರ ಹಾಗೂ ಕೌದಳ್ಳಿ ವಿವಿಧ ಗ್ರಾಮಗಳಲ್ಲಿ ರಸ್ತೆ ಸಂಚಾರಿ ನಿಯಮ ಮತ್ತು ಹೆಲ್ಮೆಟ್ ಕಡ್ಡಾಯ ಜನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಸಂಚಾರಿ ನಿಯಮಗಳ ಪಾಲನೆಯನ್ನು ವಾಹನ ಸವಾರರು ಪಾಲನೆ ಮಾಡಬೇಕು. ಜೊತೆಗೆ ದ್ವಿಚಕ್ರ ವಾಹನ ಸವಾರರು ತಪ್ಪದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳುವ ಮೂಲಕ ವಾಹನ ಚಾಲನೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ಅಧಿಸೂಚನೆಯಂತೆ ವಾಹನ ಸವಾರರು ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಸಂಚರಿಸಬೇಕು. ತ್ರಿಬಲ್ ರೈಡಿಂಗ್ ಮಾಡುವುದು ಕಾನೂನು ಅಪರಾಧವಾಗಿದ್ದು, ಮದ್ಯಪಾನ ಸೇವನೆ ಮಾಡಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಪೊಲೀಸ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುತ್ತದೆ. ಹೀಗಾಗಿ ಗ್ರಾಮಾಂತರ ಪ್ರದೇಶದ ನಾಗರಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡುವ ಮೂಲಕ ಕಾನೂನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ವಿವಿಧ ಸ್ಥಳಗಳಲ್ಲಿ ಸಂಚಾರಿ ನಿಯಮ ಜಾಗೃತಿ ಅಭಿಯಾನದ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.ವಿವಿಧ ಗ್ರಾಮದ ಮುಖಂಡರು, ವಾಹನ ಸವಾರರು, ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.