ಸಾರಾಂಶ
ಲೋಕಸಭಾ ಚುನಾವಣೆ ಹಿನ್ನೆಲೆ ನಡೆದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆ ವಹಿಸಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತಎಣಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ಮತ ಎಣಿಕೆ ಕಾರ್ಯದ ಕುರಿತು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಮತ ಎಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಫಲಿತಾಂಶವು ಜೂ. 4ಕ್ಕೆ ಹೊರ ಬರಲಿದ್ದು, ಅಂದು ಮತ ಏಣಿಕಾ ಕಾರ್ಯವನ್ನು ನಗರದ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಸಲಾಗುವುದು. ಮತ ಎಣಿಕೆ ಕಾರ್ಯದಲ್ಲಿ ಆಯೋಗವು ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮತ ಎಣಿಕೆ ಕಾರ್ಯವು ಸುಗಮವಾಗಿ ನಡೆಯಬೇಕಾಗಿದ್ದು, ಮತ ಎಣಿಕಾ ಕಾರ್ಯಕ್ಕಾಗಿ ನಿಯೋಜಿಸಲಾದ ಅಧಿಕಾರಿಗಳು ಮತ ಎಣಿಕೆ ದಿನದಂದು ಬೆಳಗ್ಗೆ 6 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ, ಬೆಳಗ್ಗೆ 6.30ಕ್ಕೆ ವರದಿ ಮಾಡಿಕೊಳ್ಳಬೇಕು. ತಮಗೆ ಹಂಚಿಕೆಯಾದ ವಿಧಾನಸಭಾ ಕ್ಷೇತ್ರದ ಮಾಹಿತಿ ಹಾಗೂ ಟೇಬಲ್ ಸಂಖ್ಯೆ ತಿಳಿದುಕೊಳ್ಳಬೇಕು. ಮತಯಂತ್ರಗಳ ಪ್ರಕಾರ ದಾಖಲಾದ ಮತಗಳ ಸಂಖ್ಯೆ, ಚಲಾವಣೆಯಾದ ಮತಗಳು ಇತ್ಯಾದಿಗಳ ವಿವರ ಪಡೆಯಬೇಕು ಎಂದು ಸೂಚನೆ ನೀಡಿದರು.ಮತ ಎಣಿಕೆ ದಿನ ಮೊದಲಿಗೆ ಬೆಳಗ್ಗೆ 8 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆ ಪ್ರಾರಂಭಗೊಂಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಮತ ಎಣಿಕೆ ಕಾರ್ಯದಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನ ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ತೊಂದರೆ ಉಂಟಾದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ತರಬೇತಿ:ಮತ ಎಣಿಕೆ ನಿಮಿತ್ತ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಮತ ಎಣಿಕೆ ಕಾರ್ಯದ ಕುರಿತು ಸಂಪೂರ್ಣ ವಿವರ ನೀಡಿದರು.ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಮಾತನಾಡಿ, ಅಂಚೆ ಮತಪತ್ರ-ಎಣಿಕೆ ಸಿಬ್ಬಂದಿಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಕಾರ್ಯನಿರ್ವಹಿಸಬೇಕು. ಇವಿಎಂನಿಂದ ಮತ ಎಣಿಕೆ ಮಾಡುವ ಮೊದಲು ಅಂಚೆ ಮತಗಳ ಎಣಿಕೆ ಕೈಗೊಳ್ಳಬೇಕು. ಅಂಚೆ ಮತಗಳ ಎಣಿಕೆಗೆ ಪ್ರತಿ ಟೇಬಲ್‌ನಲ್ಲಿ ಒಬ್ಬರು ಎ.ಆರ್.ಓ., ಒಬ್ಬರು ಎಣಿಕೆ ಮೇಲ್ವಿಚಾರಕರು (ಸಿಎಸ್) ಮತ್ತು ಇಬ್ಬರು ಎಣಿಕೆ ಸಹಾಯಕರು(ಸಿಎ) ಇರುತ್ತಾರೆ. ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುತ್ತದೆ. ಫಾರ್ಮ್ 13ಎ ಮತ್ತು 13ಬಿ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ನಂತರ ಒಳ ಕವರ್ ಅನ್ನು ತೆರೆಯಬೇಕು. ಯಾವ ಯಾವ ಸಂದರ್ಭದಲ್ಲಿ ಅಂಚೆ ಮತ ಪತ್ರವನ್ನು ತಿರಸ್ಕರಿಸಬೇಕು ಹಾಗೂ ತಿರಸ್ಕರಿಸಬಾರದು ಎಂಬುದರ ಬಗ್ಗೆ ಮಾಹಿತಿ ನೀಡಿದರು.
ನಿರ್ದಿಷ್ಟ ಅಭ್ಯರ್ಥಿವಾರು ಅಂಚೆ ಮತ ವಿತರಣೆ ಮಾಡಬೇಕು. ಪ್ರತಿ ಅಭ್ಯರ್ಥಿಯು ಪಡೆದ 25 ಮತಗಳ ಒಂದು ಬಂಡಲ್ ಅನ್ನು ಮಾಡುವುದು, ಅಭ್ಯರ್ಥಿಯು ಪಡೆದ ಒಟ್ಟು ಅಂಚೆ ಮತಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಿ ನಮೂನೆ 20ರಲ್ಲಿ ಫಲಿತಾಂಶವನ್ನು ನಮೂದಿಸಬೇಕು ಎಂದು ಮಾಹಿತಿ ನೀಡಿದರು.ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))