ಸಾರಾಂಶ
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಸಿಂಧನೂರು: ನಗರದ ಮಿನಿವಿಧಾನಸೌಧ ಕಚೇರಿಯಲ್ಲಿ ತಾಲ್ಲೂಕಾಡಳಿತದಿಂದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.ಈ ವೇಳೆ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ಸಿದ್ದರಾಮೇಶ್ವರರು ರಚಿಸಿದ ವಚನಗಳಲ್ಲಿ ಆಧ್ಯಾತ್ಮ ಕಾಣಬಹುದು. ಇವರ ತತ್ವಾದರ್ಶನಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೂ ಅರ್ಥ ಬರುತ್ತದೆ ಎಂದರು ಹೇಳಿದರು.ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಜೆಡಿಎಸ್ ಮುಖಂಡ ಚಂದ್ರುಭೂಪಾಲ ನಾಡಗೌಡ, ಚಿಂತಕ ನಿರುಪಾದೆಪ್ಪ ಗುಡಿಹಾಳ ವಕೀಲ, ಭೋವಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ ಭೋವಿ ಸೇರಿದಂತೆ ಸಮಾಜ ಮುಖಂಡರು ಉಪಸ್ಥಿತರಿದ್ದರು.