ಆರೋಗ್ಯಕರ ಜೀವನಕ್ಕೆ ಆಹಾರ ಕಲಬೆರಕೆ ಕುರಿತು ಜಾಗೃತಿ ಅಗತ್ಯ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಮತ್ತು ಪೌಷ್ಟಿಕ ಆಹಾರ ದೊರೆಯುವುದು ಸವಾಲಾಗಿ ಪರಿಣಮಿಸಿದೆ. ನಾವು ಪ್ರತಿದಿನ ಸೇವಿಸುವ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಏರುಪೇರಾಗಲು ಆಹಾರ ಕಲಬೆರಕೆ ಮತ್ತು ಅಸಮರ್ಪಕ ಆಹಾರ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ಪ್ರಮುಖ ಕಾರಣಗಳಾಗಿವೆ. ಈ ಕುರಿತು ಪ್ರತಿಯೊಬ್ಬ ನಾಗರಿಕನೂ ಅರಿವು ಹೊಂದುವುದು ಅತ್ಯಗತ್ಯವಾಗಿದೆ. ಗ್ರಾಮಸ್ಥರಿಗೆ ಆಹಾರ ಕಲಬೆರಕೆ, ಅದರ ದು?ರಿಣಾಮಗಳು ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ಗುರುತಿಸುವ ಕುರಿತು ಪ್ರಜ್ವಲ್ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ತಾಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಆಹಾರ ತಂತ್ರಜ್ಞಾನ ಹಾಗೂ ಕೃಷಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಆಹಾರ ಕಲಬೆರಕೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಆಹಾರ ತಂತ್ರಜ್ಞಾನ ವಿದ್ಯಾರ್ಥಿ ಪ್ರಜ್ವಲ್.ಎ.ಎನ್ . ಅವರು ಗ್ರಾಮಸ್ಥರಿಗೆ ಆಹಾರ ಕಲಬೆರಕೆ, ಅದರ ದು?ರಿಣಾಮಗಳು ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ಗುರುತಿಸುವ ಕುರಿತು ಮಾಹಿತಿ ನೀಡಿದರು.

ಆರೋಗ್ಯಕರ ಜೀವನಕ್ಕೆ ಆಹಾರ ಕಲಬೆರಕೆ ಕುರಿತು ಜಾಗೃತಿ ಅಗತ್ಯ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಮತ್ತು ಪೌಷ್ಟಿಕ ಆಹಾರ ದೊರೆಯುವುದು ಸವಾಲಾಗಿ ಪರಿಣಮಿಸಿದೆ. ನಾವು ಪ್ರತಿದಿನ ಸೇವಿಸುವ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಏರುಪೇರಾಗಲು ಆಹಾರ ಕಲಬೆರಕೆ ಮತ್ತು ಅಸಮರ್ಪಕ ಆಹಾರ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ಪ್ರಮುಖ ಕಾರಣಗಳಾಗಿವೆ. ಈ ಕುರಿತು ಪ್ರತಿಯೊಬ್ಬ ನಾಗರಿಕನೂ ಅರಿವು ಹೊಂದುವುದು ಅತ್ಯಗತ್ಯವಾಗಿದೆ.

ಈ ಕಾರ್ಯಕ್ರಮದಲ್ಲಿ ಚೌಡೇನಹಳ್ಳಿ ಗ್ರಾಮದ ಗ್ರಾಮಸ್ಥರು ಭಾಗವಹಿಸಿ ಆಹಾರ ಸುರಕ್ಷತೆ ಮತ್ತು ಶುದ್ಧ ಆಹಾರದ ಮಹತ್ವದ ಕುರಿತು ಅರಿವು ಪಡೆದುಕೊಂಡರು. ಕೃಷಿ ಹಾಗೂ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಸಹಯೋಗದಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮವು ಗ್ರಾಮಸ್ಥರ ಸಕ್ರಿಯ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿತು.