ಅನ್ನದಾನ ಉತ್ತಮ ಕಾರ್ಯ: ಬಿವೈಆರ್‌

| Published : Mar 01 2025, 01:02 AM IST

ಸಾರಾಂಶ

ಶಿವಮೊಗ್ಗ : ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಅಂಗವಾಗಿ ಶುಕ್ರವಾರ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಅಮೃತ ಅನ್ನದಾಸೋಹ ಪ್ರತಿಷ್ಠಾನದ ಸಹಯೋಗದೊಂದಿಗೆ ಅನ್ನದಾನ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ : ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನ ಅಂಗವಾಗಿ ಶುಕ್ರವಾರ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಅಮೃತ ಅನ್ನದಾಸೋಹ ಪ್ರತಿಷ್ಠಾನದ ಸಹಯೋಗದೊಂದಿಗೆ ಅನ್ನದಾನ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇದೊಂದು ಉತ್ತಮ ಕಾರ್ಯಕ್ರಮ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳ ಜೊತೆಗೆ ಬಂದ ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅಮೃತ ಅನ್ನದಾಸೋಹ ಪ್ರತಿಷ್ಠಾನದಿಂದ ಸುಮಾರು 600ಕ್ಕೂ ಹೆಚ್ಚು ಜನರಿಗೆ ಅನ್ನದಾನ ಮಾಡಲಾಗುತ್ತಿರುವುದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.ತಂದೆಯ ಜನ್ಮದಿನ ಅವರ ಅಭಿಮಾನಿಗಳು ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ನನಗೆ ಸಂತೋಷ ತಂದಿದೆ. ಎಲ್ಲರೂ ಅವರವರ ಕುಟುಂಬದ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ರೀತಿಯ ಅನ್ನದಾಸೋಹಕ್ಕೆ ಮುಂದಾದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮತ್ತು ಅವರ ಸಂಬಂಧಕರಿಗೆ ಅನುಕೂಲವಾಗುತ್ತದೆ. ಅದೇ ರೀತಿ ಅವರಿಗೆ ರಾತ್ರಿ ತಂಗಲು ಮತ್ತು ತುರ್ತು ಸಂದರ್ಭದಲ್ಲಿ ಒಂದು ಆಸರೆಯಾಗಿ ಒಂದು ಷೆಡ್‌ನ ಅವಶ್ಯಕತೆ ಇದೆ ಎಂದು ಆಡಳಿತ ತಿಳಿಸಿದ ಮೇರೆಗೆ ಅದಕ್ಕೂ ಕೂಡ ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.ಹೂವಿನ ಜೊತೆಗೆ ನಾರು ಸ್ವರ್ಗ ಸೇರಿದಂತೆ ಇವತ್ತಿನ ಕಾರ್ಯಕ್ರಮ ಹಲವು ಊರುಗಳಿಂದ ಬಂದ ಮಧ್ಯಮ ಮತ್ತು ಬಡ ವರ್ಗದ ಜನರಿಗೆ ಅನುಕೂಲವಾಗಿದೆ. ಬಿಎಸ್‌ವೈ ಕಾಲದಲ್ಲಿ ಈ ಆಸ್ಪತ್ರೆ 1100 ಬೆಡ್‌ಗೆ ಮೇಲ್ದರ್ಜೆಗೆ ಏರಿದ್ದಲ್ಲದೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತನೆಯಾಯಿತು. ಅದಕ್ಕೆ ಎಲ್ಲರ ಸಹಕಾರವು ಸಿಕ್ಕಿದ್ದೇ ಕಾರಣವಾಯಿತು ಎಂದರು.ಪ್ರತಿಷ್ಠಾನದ ಡಾ.ಸತೀಶ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಹುಟ್ಟಿದ ಹಬ್ಬಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಯುವ ಈ ದಾಸೋಹ ಕಾರ್ಯಕ್ರಮಕ್ಕೆ ಸಹಕಾರ ನೀಡಬಹುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯರಾದ ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕರಾದ ತಿಮ್ಮಪ್ಪ, ಜಿಲ್ಲಾ ಸರ್ಜನ್ ಸಿದ್ದನಗೌಡ ಪಾಟೀಲ್, ಸಿಈಒ ಉಮಾ ಹಾಗೂ ಪ್ರತಿಷ್ಠಾನದ ಪ್ರಮುಖರಾದ ಸತ್ಯನಾರಾಯಣ್, ಬಿಜೆಪಿ ಪ್ರಮುಖರಾದ ಜಗದೀಶ್, ನಾಗರಾಜ್, ಸಂತೋಷ್ ಬಳ್ಳಕೆರೆ, ರಾಜೇಶ್ ಕಾಮತ್, ದಿವಾಕರ್ ಶೆಟ್ಟಿ, ಸುರೇಖಾ ಮುರಳೀಧರ್, ಶಿಲ್ಪ ಶ್ರೀನಿವಾಸ್, ಮಂಗಳ ನಾಗೇಂದ್ರ, ಬಾಬಿ, ನಾಗರಾಜ್, ಎನ್.ಡಿ.ಸತೀಶ್, ಶಿವರಾಜ್ ಮತ್ತಿತರಿದ್ದರು.